ಹೊಸ ಅಡಿಕೆ ಧಾರಣೆ ಮತ್ತೆ ಏರಿಕೆ | 450 @ಕ್ಯಾಂಪ್ಕೋ | ನಿರೀಕ್ಷಿತ ಧಾರಣೆ ತಲುಪಿದ ಅಡಿಕೆ ಮಾರುಕಟ್ಟೆ |

July 25, 2022
11:53 AM

ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಹೊಸ ಅಡಿಕೆ ಧಾರಣೆ 450 ರೂಪಾಯಿಗೆ ಅಧಿಕೃತವಾಗಿದೆ. ಇದೇ ವೇಳೆ ಹಳೆ ಅಡಿಕೆ  ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 455 ರೂಪಾಯಿ ಹಾಗೂ ಹಳೆ ಅಡಿಕೆ 565 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಎರಡು ವಾರಗಳಿಂದ  ಅಡಿಕೆ ಮಾರುಕಟ್ಟೆಯಲ್ಲಿ ತೇಜಿಯ ವಾತಾವರಣ ಕಂಡುಬಂದಿತ್ತು. ಮುಂದಿನ ಎರಡು ವಾರದಲ್ಲಿ  ಹೊಸ ಅಡಿಕೆ ಧಾರಣೆ 450 ರೂಪಾಯಿ ತಲುಪಬಹುದು  ಎನ್ನುವ ನಿರೀಕ್ಷೆ ಇತ್ತು. ಇದೀಗ ಕ್ಯಾಂಪ್ಕೋ ಅಧಿಕೃತವಾಗಿ 450 ರೂಪಾಯಿಗೆ ಖರೀದಿ ನಡೆಸುವ ಮೂಲಕ ಅಡಿಕೆ ಧಾರಣೆ ಮತ್ತೆ ನೆಗೆತ ಕಂಡಿದೆ. ಹಳೆ ಅಡಿಕೆ ಧಾರಣೆಯಲ್ಲೂ ಇದೇ ವೇಳೆ ಏರಿಕೆ ಕಂಡಿದೆ.  560 ರೂಪಾಯಿಗೆ ಮಾರುಕಟ್ಟೆ ಏರಿಕೆ ಕಂಡಿದೆ. ಸದ್ಯದ ಟ್ರೆಂಡ್‌ ಪ್ರಕಾರ ಮಾರುಕಟ್ಟೆಯಲ್ಲಿ ಅಡಿಕೆ ಕೊರತೆ ಇದೆ. ಹಾಗೆಂದು ವಿಪರೀತವಾಗಿ ಏರಿಕೆಯ ನಿರೀಕ್ಷೆಯನ್ನು ಬೆಳೆಗಾರರು ಸದ್ಯದ ಮಟ್ಟಿಗೆ ಇರಿಸಿಕೊಳ್ಳಬೇಕಾಗಿಲ್ಲ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ.

ರೂರಲ್‌ ಮಿರರ್‌ ವಿಶ್ಲೇಷಣೆ :

 

ಮಳೆಯ ಅಬ್ಬರದ ನಡುವೆ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ… ? | ಮುಂದಿನ ವಾರ 10 ರೂಪಾಯಿ ಏರಿಕೆ ಸಾಧ್ಯತೆ ?

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror