ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಹೊಸ ಅಡಿಕೆ ಧಾರಣೆ 450 ರೂಪಾಯಿಗೆ ಅಧಿಕೃತವಾಗಿದೆ. ಇದೇ ವೇಳೆ ಹಳೆ ಅಡಿಕೆ ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 455 ರೂಪಾಯಿ ಹಾಗೂ ಹಳೆ ಅಡಿಕೆ 565 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯಲ್ಲಿ ತೇಜಿಯ ವಾತಾವರಣ ಕಂಡುಬಂದಿತ್ತು. ಮುಂದಿನ ಎರಡು ವಾರದಲ್ಲಿ ಹೊಸ ಅಡಿಕೆ ಧಾರಣೆ 450 ರೂಪಾಯಿ ತಲುಪಬಹುದು ಎನ್ನುವ ನಿರೀಕ್ಷೆ ಇತ್ತು. ಇದೀಗ ಕ್ಯಾಂಪ್ಕೋ ಅಧಿಕೃತವಾಗಿ 450 ರೂಪಾಯಿಗೆ ಖರೀದಿ ನಡೆಸುವ ಮೂಲಕ ಅಡಿಕೆ ಧಾರಣೆ ಮತ್ತೆ ನೆಗೆತ ಕಂಡಿದೆ. ಹಳೆ ಅಡಿಕೆ ಧಾರಣೆಯಲ್ಲೂ ಇದೇ ವೇಳೆ ಏರಿಕೆ ಕಂಡಿದೆ. 560 ರೂಪಾಯಿಗೆ ಮಾರುಕಟ್ಟೆ ಏರಿಕೆ ಕಂಡಿದೆ. ಸದ್ಯದ ಟ್ರೆಂಡ್ ಪ್ರಕಾರ ಮಾರುಕಟ್ಟೆಯಲ್ಲಿ ಅಡಿಕೆ ಕೊರತೆ ಇದೆ. ಹಾಗೆಂದು ವಿಪರೀತವಾಗಿ ಏರಿಕೆಯ ನಿರೀಕ್ಷೆಯನ್ನು ಬೆಳೆಗಾರರು ಸದ್ಯದ ಮಟ್ಟಿಗೆ ಇರಿಸಿಕೊಳ್ಳಬೇಕಾಗಿಲ್ಲ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ.
ರೂರಲ್ ಮಿರರ್ ವಿಶ್ಲೇಷಣೆ :
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…