ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಈಗ ದ್ವಿತೀಯ ದರ್ಜೆಯ ಅಡಿಕೆ ಧಾರಣೆಯೂ ಮತ್ತೆ ಏರಿದೆ. ಹೀಗಾಗಿ ಪಠೋರ, ಕರಿಗೋಟು ಧಾರಣೆಯಲ್ಲೂ ಏರಿಕೆ ಕಂಡಿದೆ. ಕ್ಯಾಂಪ್ಕೋ ಪಠೋರ ದರದಲ್ಲಿ 5 ರೂಪಾಯಿ ಹಾಗೂ ಕರಿಗೋಟು ದರದಲ್ಲಿ 5 ರೂಪಾಯಿ ಏರಿಕೆ ಮಾಡಿದೆ. ಹೀಗಾಗಿ ಹೊಸ ಪಠೋರ 365 ರೂಪಾಯಿ ಹಾಗೂ ಕರಿಗೋಟು, ಉಳ್ಳಿಗಡ್ಡೆಯ ಧಾರಣೆ 280 ರೂಪಾಯಿಗೆ ಖರೀದಿ ಮಾಡುತ್ತಿದೆ. ಹಳೆ ಪಠೋರ ಈಗಲೂ 365 ರೂಪಾಯಿಗೆ ಖರೀದಿ ನಡೆಯುತ್ತಿದೆ. ಹೊಸ ಅಡಿಕೆ ಧಾರಣೆ 460 ರೂಪಾಯಿಗೆ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆ ಮಾಡುತ್ತಿದೆ. ದ್ವಿತೀಯ ದರ್ಜೆಯ ಅಡಿಕೆಗೂ ಏರಿಕೆಯಾಗಿದೆ.
ಇದೇ ವೇಳೆ ರಬ್ಬರ್ ಧಾರಣೆ ಇಳಿಮುಖವಾಗುತ್ತಿದೆ. ರಬ್ಬರ್ ಧಾರಣೆ(RSS4) 162 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಎರಡು ವಾರಗಳಿಂದ ರಬ್ಬರ್ ಧಾರಣೆ ಇಳಿಕೆಯ ಹಾದಿಯಲ್ಲಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?