ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ – ಕ್ಯಾಂಪ್ಕೋ ಭರವಸೆ

December 16, 2022
9:34 AM

ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಅಡಿಕೆ ಬೆಳೆ ಕುಸಿತ ಕಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಯ ಅಭಾವ ತೀವ್ರ ರೀತಿಯಲ್ಲಿ ಮಾರುಕಟ್ಟೆಯನ್ನು ಕಾಡಲಿದೆ. ಹಬ್ಬದ ನಂತರ ಮಾರುಕಟ್ಟೆ ಚೇತರಿಕೆ ಕಾಣುವ ಎಲ್ಲಾ ಲಕ್ಷಣಗಳು ಇರುವುದಾಗಿ ಅಡಿಕೆ ಮಾರುಕಟ್ಟೆ ತಜ್ಞರ ಅಭಿಪ್ರಾಯ. ಹೀಗಾಗಿ  ರೈತರು ಗಾಳಿಸುದ್ಧಿ ಮತ್ತು ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ಈಗ ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಲಿಲ್ಲ. ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆಗಳನ್ನು ಎದುರಿಸುವುದರಿಂದ ಸಾಮಾನ್ಯವಾಗಿ ಪಾನ್‌ಮಸಾಲಾ ಕಂಪನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದನೆಯನ್ನು ಮಾಡುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿಯುವುದು ಸಾಮಾನ್ಯ. ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ. ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆಗಳು ಬರುತ್ತಿವೆ.

Advertisement

ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ. ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ತುಂಬಾ ಕಡಿಮೆಯಾಗಿದೆ. ಸಹಕಾರಿ ಸಂಘಗಳ ನಿರಂತರ ಅನುಸರಣಾ ಕ್ರಮಗಳಿಂದಾಗಿ ಕನಿಷ್ಠ ಅಮದು ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸುವಂತೆ ,ವಾಣಿಜ್ಯ ಸಚಿವಾಲಯದಿಂದ ಕೃಷಿಸಚಿವಾಲಯಕ್ಕೆ ಶಿಫಾರಸ್ಸನ್ನು ಕಳುಹಿಸಲಾಗಿದೆ. ಶೀಘ್ರ ಆದೇಶ ನೀಡುವುದಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆಯವರು ಆಶ್ವಾಸನೆ ನೀಡಿದ್ದಾರೆ. ಕೇಂದ್ರದ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ವಿದೇಶಿ ಅಡಿಕೆಯ ಆಮದಿಗೆ ತಡೆಬಿದ್ದಿದೆ. ಅದಕ್ಕಾಗಿ ಕ್ಯಾಂಪ್ಕೊ ಕೇಂದ್ರ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. ಸಂಕ್ರಾಂತಿ ಹಬ್ಬದ ನಂತರ ಚಳಿ ಕಡಿಮೆಯಾಗಿ ಬೇಡಿಕೆ ಉತ್ತಮಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ರೈತರು ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡವುದರ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror