ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಪ್ರತೀ ಕೆಜಿ ಹಳೆ ಅಡಿಕೆಗೆ ಹಳೆ ಅಡಿಕೆ 480 ರೂಪಾಯಿ ಹಾಗೂ ಹೊಸ ಅಡಿಕೆ 415 ರೂಪಾಯಿಗೆ ಕ್ಯಾಂಪ್ಕೋ #Campco ಖರೀದಿ ನಡೆಸುತ್ತಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲೂ ಹೊಸ ಅಡಿಕೆ ಧಾರಣೆಯಲ್ಲಿ ಚೇತರಿಕೆ ಕಂಡಿದೆ. ಹಳೆ ಅಡಿಕೆ ಖರೀದಿಯಲ್ಲಿ ಉತ್ಸಾಹ ಕಂಡಿಲ್ಲ. ಖಾಸಗಿ ಮಾರುಕಟ್ಟೆಯಲ್ಲಿ ಹಳೆ ಅಡಿಕೆ 478 ರೂಪಾಯಿ ಹಾಗೂ ಹೊಸ ಅಡಿಕೆ 418 ರೂಪಾಯಿಗೆ ಖರೀದಿ ನಡೆಯುತ್ತಿದೆ. ಕ್ಯಾಂಪ್ಕೋ ಒಮ್ಮೆಲೇ 5 ರೂಪಾಯಿ ಏರಿಕೆ ಮಾಡಿದೆ. ಇದೀಗ ಎರಡನೇ ಬಾರಿ ಕ್ಯಾಂಪ್ಕೋ ತನ್ನ ಧಾರಣೆಯಲ್ಲಿ ಏರಿಕೆಯನ್ನು ಮಾಡಿದ್ದು, ಹೊಸ ಅಡಿಕೆ ದಾಸ್ತಾನು ಹಾಗೂ ಬೇಡಿಕೆಯ ಕಾರಣದಿಂದ ಸದ್ಯ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…