ಅಡಿಕೆ ಧಾರಣೆ | ಕ್ಯಾಂಪ್ಕೋ ಒಮ್ಮೆಲೇ 10 ರೂಪಾಯಿ ಜಂಪ್‌ | ಅಡಿಕೆ ಬೆಳೆಗಾರರು “ಜಿಂಗಾಲಾಲ” |

September 17, 2021
10:57 AM

ಅಡಿಕೆ ಧಾರಣೆ ದಾಖಲೆಯತ್ತ ದಾಪುಗಾಲು ಹಾಕುತ್ತಿರುವಂತೆಯೇ ಕ್ಯಾಂಪ್ಕೋ ಒಮ್ಮೆಲೇ 10  ರೂಪಾಯಿ ಏರಿಕೆ ಮಾಡಿದೆ. ಹೀಗಾಗಿ ಖಾಸಗೀ ವ್ಯಾಪಾರಿಗಳೂ ಧಾರಣೆ ಏರಿಕೆ ನಡೆಸುವ ಸಾಧ್ಯತೆ ಹೆಚ್ಚಿದೆ. ಗುರುವಾರ ಅಡಿಕೆ ಧಾರಣೆಯಲ್ಲಿ ಖಾಸಗೀ ವಲಯದಲ್ಲಿ  ಏರಿಕೆ ಕಂಡರೂ ಕ್ಯಾಂಪ್ಕೋ ಧಾರಣೆಯಲ್ಲಿ  ಏರಿಕೆ ಮಾಡಿಲ್ಲ. ಶುಕ್ರವಾರ ಒಮ್ಮೆಲೇ 10  ರೂಪಾಯಿ ಏರಿಕೆ ಮಾಡಿ 490  ರೂಪಾಯಿಗೆ ಹೊಸ ಅಡಿಕೆ ಹಾಗೂ ಹಳೆ ಅಡಿಕೆ 5 ರೂಪಾಯಿ ಏರಿಕೆ ಮಾಡಿ 510 ರೂಪಾಯಿಗೆ ಖರೀದಿ ಮಾಡುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ  ಕ್ಯಾಂಪ್ಕೋ ಸೇರಿದಂತೆ ಸಹಕಾರಿ ಸಂಸ್ಥೆಗಳು ಒಮ್ಮೆಲೇ 10  ರೂಪಾಯಿ ಏರಿಕೆ ಮಾಡಿದ ಉದಾಹರಣೆಗಳು ತೀರಾ ಕಡಿಮೆ. ಈಗಿನ ಅಡಿಕೆ ಮಾರುಕಟ್ಟೆ ಪರಿಸ್ಥಿತಿ ಹಾಗೂ ಬೇಡಿಕೆಯ ಕಾರಣದಿಂದ ಅಡಿಕೆ ಧಾರಣೆಯು ಒಮ್ಮೆಲೇ ಜಂಪ್‌ ಕಾಣುತ್ತಿದೆ. ಅಡಿಕೆಯ ಅತ್ಯಧಿಕ ಧಾರಣೆ 500  ರೂಪಾಯಿ ಸಹಕಾರಿ ಸಂಘಗಳ ಮೂಲಕವೂ ಅಧಿಕೃತವಾಗಿ ತಲುಪಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror