ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಭಾರತ ಮಾತ್ರವಲ್ಲ ವಿವಿಧ ದೇಶಗಳಲ್ಲೂ ಅಡಿಕೆ ಮೇಲೆ ನಿಗಾ ಇಡಲಾಗಿದೆ. ಈಚೆಗೆ ಪಾಕಿಸ್ತಾನದಲ್ಲೂ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಕಸ್ಟಮ್ಸ್ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.
ಅಡಿಕೆ ಧಾರಣೆ ಏರಿಕೆಯಾಗಿರುವುದು ಹಾಗೂ ಆ ಬಳಿಕ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಎಲ್ಲೆಡೆಯೂ ನಿಗಾ ವಹಿಸಲಾಗಿತ್ತು. ಈಚೆಗೆ ಪಾಕಿಸ್ತಾನದಲ್ಲೂ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವ ಬಗ್ಗೆಯೂ ವರದಿಯಾಗಿದೆ. ಅಪ್ಘಾನ್ ಮೂಲಕವೂ ಅಡಿಕೆ ಸಾಗಾಟವಾಗುತ್ತಿರುವ ಬಗ್ಗೆಯೂ ಆಗಸ್ಟ್ ತಿಂಗಳಲ್ಲಿ ವರದಿಯಾಗಿತ್ತು. ಅದಾದ ನಂತರ ಬೇರೆ ಮಾರ್ಗಗಳ ಮೂಲಕ ಅಡಿಕೆ ಕಳ್ಳದಾರಿಯ ಮೂಲಕ ಪಾಕಿಸ್ತಾನಕ್ಕೆ ಆಮದು ಆಗುವ ಬಗ್ಗೆ ಮಾಹಿತಿ ಇತ್ತು. ಹೀಗಾಗಿ ಪಾಕಿಸ್ತಾನದ ಕಸ್ಟಮ್ಸ್ ಇಲಾಖೆಯು ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿತ್ತು. ಈ ಸಂದರ್ಭ ಸುಮಾರು ಏಳು ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಸೆ 18 ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 48 ಸಾವಿರ ಕೆಜಿ ಅಡಿಕೆ ವಶಪಡಿಸಿಕೊಂಡಿದ್ದರು. ಒಟ್ಟು 30 ದಿನಗಳಲ್ಲಿ 13 ಕೋಟಿ ರೂಪಾಯಿಗೂ ಮಿಕ್ಕಿದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹೀಗೆ ವಶಪಡಿಸಿಕೊಂಡ ಅಡಿಕೆಯ ವಿದೇಶಿ ಅಡಿಕೆ ಎಂದಷ್ಟೇ ದಾಖಲಾಗಿದ್ದು ಎಲ್ಲಿಯ ಅಡಿಕೆ ಎಂಬವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿಯಲ್ಲಿ ತಿಳಿಸಿವೆ. ಪಾಕಿಸ್ತಾನದಲ್ಲಿ ಅಡಿಕೆ ಬಳಕೆಯ ವಿವಿಧ ಕಂಪನಿಗಳು ಕಾರ್ಯನಿರ್ವಹಿಸುತ್ತವೆ. ಗುಟ್ಕಾ ಮೊದಲಾದ ವಸ್ತುಗಳ ತಯಾರಿಕೆ ಅಲ್ಲಿ ನಡೆಯುತ್ತದೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…