Advertisement
MIRROR FOCUS

ಅಡಿಕೆ ತೋಟ ವಿಸ್ತರಣೆಯ ವೇಗ ಹೆಚ್ಚುತ್ತಿದೆ | ಅಪಾಯದ ಬೆಳವಣಿಗೆಯೇ ? ಪೂರಕವಾಗಬಹುದೇ ? | ಅಡಿಕೆಗೆ ಮಾರುಕಟ್ಟೆ ಎಲ್ಲಿ ?

Share

ಅಡಿಕೆ ರೇಟು ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರು ಈಗ ಖುಷ್…!‌ ಯಾವ ಕೃಷಿಯಲ್ಲೂ ಈ ಮಾದರಿಯ ಲಾಭವೂ ಇಲ್ಲ, ನೆಮ್ಮದಿಯೂ ಇಲ್ಲ..! ಇಂತಹ ಭಾವನೆಯೇ ನಾಡಿನಲ್ಲಿ ಬಂದು ಬಿಟ್ಟಿದೆ. ಹೀಗಾಗಿ ಅಡಿಕೆ ಬೆಳೆಯದ, ಅಡಿಕೆ ಗುಣಮಟ್ಟ ಬಾರದ ಪ್ರದೇಶದಲ್ಲೂ ಅಡಿಕೆ ಬೆಳೆ ಆರಂಭವಾಗಿದೆ. ಸ್ವಲ್ಪ ಸ್ವಲ್ಪ ಪ್ರಮಾಣದಲ್ಲಲ್ಲ, ಕನಿಷ್ಟ  5  ಸಾವಿರ ಗಿಡಗಳ ನಾಟಿ ಕಾರ್ಯ ನಡೆಯುತ್ತಿದೆ. ಮುಂದಿನ  10  ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆ, ಅಡಿಕೆ ಧಾರಣೆ ಹೇಗಿರಬಹುದು ? ಮಾರುಕಟ್ಟೆ ಅಧ್ಯಯನ ನಡೆದಿದೆಯೇ ? ಬೆಳೆಗಾರರು ಯೋಚಿಸಿದ್ದಾರೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗುತ್ತಿದೆ.

Advertisement
Advertisement
Advertisement

ಕಳೆದ ಎರಡು ವರ್ಷಗಳಿಂದ ಅಡಿಕೆ ಧಾರಣೆ ಉತ್ತಮವಾಗಿದೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆ ಎರಡೂ ಮಾದರಿಯ ಅಡಿಕೆಗೆ ಉತ್ತಮ ಧಾರಣೆ ಲಭ್ಯವಾಗುತ್ತಿದೆ. ಉಳಿದೆಲ್ಲಾ ಕೃಷಿಯಲ್ಲೂ ಅಡಿಕೆಯಷ್ಟು ಲಾಭವೂ ಇಲ್ಲ, ಧಾರಣೆಯೂ ಲಭ್ಯವಿಲ್ಲ ಎನ್ನುವ ಭಾವನೆಯಿಂದ ಎಲ್ಲೆಡೆಯೂ ಅಡಿಕೆ ಕೃಷಿ ನಡೆಯುತ್ತಿದೆ. ಮಲೆನಾಡು ಪ್ರದೇಶದಿಂದ ಆರಂಭವಾಗಿ ಬಯಲುಸೀಮೆಯಲ್ಲೂ ಅಡಿಕೆ ಕೃಷಿ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ಈ ಹಿಂದೆ ಕೇರಳದ ಅದರಲ್ಲೂ ಬದಿಯಡ್ಕದ ಚಾಲಿ ಅಡಿಕೆಗೆ ಉತ್ತಮ ಧಾರಣೆ ಸಿಕ್ಕಿದರೆ, ಆ ಬಳಿಕ ವಿಟ್ಲ, ಪಾಣಾಜೆ, ಬಾಯಾರು ಪ್ರದೇಶದ ಚಾಲಿ ಅಡಿಕೆಗೆ ಉತ್ತಮ ಧಾರಣೆ ಲಭ್ಯವಾಗುತ್ತಿತ್ತು, ಉತ್ತರ ಭಾರತದ ವ್ಯಾಪಾರಿಗಳು ಇದೇ ಅಡಿಕೆಯನ್ನು ಕೇಳಿ ಪಡೆಯುತ್ತಿದ್ದರು. ಅದೇ ಮಾದರಿಯಲ್ಲಿ ಶಿವಮೊಗ್ಗ, ಸಾಗರ ಪ್ರದೇಶದ ಕೆಂಪಡಿಕೆಗೂ ಅದೇ ಮಾದರಿಯಲ್ಲಿ ಧಾರಣೆ ಲಭ್ಯವಾಗುತ್ತಿತ್ತು. ಮಲೆನಾಡಿನ ಕೆಂಪಡಿಕೆಗೆ ಸಹಜವಾಗಿಯೇ ಉತ್ತಮ ಧಾರಣೆ ಸಿಗುತ್ತಿತ್ತು. ಎರಡೂ ಪ್ರದೇಶದ ಚಾಲಿ ಹಾಗೂ ಕೆಂಪಡಿಕೆ ತಿಂದು ಉಗುಳುವುದು  ಬಿಟ್ಟರೆ ಬೇರೆ ಯಾವುದೇ ಉತ್ಪಾದನೆಗೂ ಹೆಚ್ಚಾಗಿ ಬಳಕೆಯಾಗುವುದು  ಇದುವರೆಗೂ ಮಾಹಿತಿ ಇಲ್ಲ. ಸನ್ಣ ಪುಟ್ಟ ಉದ್ಯಮಗಳಿಗೆ ಅಡಿಕೆ ಬಳಕೆಯಾದರೂ ದೊಡ್ಡ ಪ್ರಮಾಣದಲ್ಲಿ ಗುಟ್ಕಾ ಹಾಗೂ ಪಾನ್‌ ಮಸಾಲೆ, ಪಾನ್‌ ಬೀಡಾ ಗಳಿಗೆ ಬಳಕೆಯಾಗುತ್ತದೆ.  ಹಾಗಿದ್ದರೆ ಇಡೀ ದೇಶಕ್ಕೆ ಅಡಿಕೆ ಎಷ್ಟು ಪ್ರಮಾಣದಲ್ಲಿ  ಬೇಕಾಗುತ್ತದೆ ? ಮಾರುಕಟ್ಟೆ ಎಷ್ಟು ಇರಬೇಕು ? ವ್ಯಾಪಕಾಗಿ ಅಡಿಕೆ ಬೆಳೆದರೆ ಮುಂದಿನ  10  ವರ್ಷಗಳಲ್ಲಿ  ಅಡಿಕೆ ಬೆಳೆಯ, ಮಾರುಕಟ್ಟೆಯ ಪರಿಸ್ಥಿತಿ ಏನು ?

Advertisement

ಮಾಹಿತಿಗಳ ಪ್ರಕಾರ ಅಧಿಕೃತವಾಗಿ ಸಿಪಿಸಿಆರ್‌ ಐ ಅಂತಹ ಸಂಸ್ಥೆಯ ಮೂಲಕವೇ ವರ್ಷಕ್ಕೆ ಸುಮಾರು .1 ರಿಂದ1.5 ಲಕ್ಷ ಸುಧಾರಿತ, ಹೆಚ್ಚಿನ ಫಸಲು ಬರುವ ಅಡಿಕೆ ಗಿಡಗಳು ಹಾಗೂ ಗಿಡ ಮಾಡಲು ಸುಮಾರು 5  ಲಕ್ಷ ಅಡಿಕೆ ಬೀಜಗಳನ್ನು ರೈತರು ಈಗಾಗಲೇ ಕೊಂಡೊಯ್ಯುತ್ತಿದ್ದಾರೆ, ಇನ್ನು ಉಳಿದ ನರ್ಸರಿಗಳ ಮೂಲಕ ಪ್ರತ್ಯೇಕವಾಗಿ ಗಿಡಗಳ ಮಾರಾಟ ನಡೆಯುತ್ತದೆ.  ಹೀಗಾಗಿ  ವಾರ್ಷಿಕವಾಗಿ ಸರಾಸರಿ ಸುಮಾರು  7  ಲಕ್ಷ ಗಿಡಗಳು ಅಧಿಕೃತವಾಗಿ ನಾಟಿಯಾದರೆ ಒಟ್ಟಾರೆ ಸುಮಾರು 20-30 ಲಕ್ಷ ಗಿಡಗಳ ನಾಟಿ ನಡೆಯಬಹುದಾಗಿದೆ. ಅದರಲ್ಲೂ ಈಚೆಗೆ ತಮಿಳುನಾಡು ಭಾಗಗಳಲ್ಲೂ ಅಡಿಕೆ ಗಿಡಗಳ ನಾಟಿ ನಡೆಯುತ್ತಿದ್ದು ಒಬ್ಬ ರೈತ ಕನಿಷ್ಟ  5 ಸಾವಿರ ಅಡಿಕೆ ಗಿಡಗಳನ್ನು ಏಕಕಾಲಕ್ಕೆ ನೆಡುತ್ತಿದ್ದಾರೆ. ಇನ್ನು ಬಯಲುಸೀಮೆಯಲ್ಲೂ ಎಕರೆಗಟ್ಟಲೆ ಅಡಿಕೆ ನಾಟಿ ಮಾಡಲಾಗುತ್ತಿದೆ, ಅದೇ ಪ್ರಮಾಣದಲ್ಲಿ ಮಲೆನಾಡು, ದ ಕ ಜಿಲ್ಲೆ, ಉತ್ತರ ಕನ್ನಡದಲ್ಲೂ ಅಡಿಕೆ ತೋಟದ ವಿಸ್ತರಣೆಯಾಗುತ್ತಿದೆ.

ವಿವಿಧ ದೇಶಗಳ ಅಡಿಕೆ ಉತ್ಪಾದನೆ

ಈಗಾಗಲೇ ಇಡೀ ಪ್ರಪಂಚದ ಅಡಿಕೆ ಬೆಳೆಯನ್ನು ಗಮನಿಸಿದಾಗಲೂ ಭಾರತದಲ್ಲಿ  ಗಣನೀಯ ಪ್ರಮಾಣದಲ್ಲಿ  ಅಡಿಕೆ ಬೆಳೆ ಏರಿಕೆಯಾಗುತ್ತಿದೆ.ಈಗಿನ ಅಂದಾಜು ಪ್ರಕಾರ ಭಾರತದಲ್ಲಿ 10 ಲಕ್ಷ ಟನ್‌ ಅಡಿಕೆ ಬೆಳೆಯಲಾಗುತ್ತಿದೆ. ಇಡೀ ಪ್ರಪಂಚದಲ್ಲಿ 10 ಕ್ಕೂ ಹೆಚ್ಚು ದೇಶಗಳಲ್ಲಿ  ಅಡಿಕೆ ಬೆಳೆಯಲಾಗುತ್ತಿದೆ, ಅದರಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದರೆ ನಂತರ ಬಾಂಗ್ಲಾದೇಶ, ಮ್ಯಾನ್ಮಾರ್‌, ಇಂಡೋನೇಶ್ಯಾ, ಥೈವಾನ್‌ ಮೊದಲಾದ ದೇಶಗಳಲ್ಲೂ ಅಡಿಕೆ ಬೆಳೆಯಲಾಗುತ್ತದೆ. ಇಡೀ ಪ್ರಪಂಚದಲ್ಲಿ  ಸುಮಾರು 17 ಲಕ್ಷ ಟನ್‌ ಅಡಿಕೆ ಬೆಳೆಯಲಾಗುತ್ತದೆ. ಆದರೆ ಭಾರತ ಹೊರತುಪಡಿಸಿ ಉಳಿದೆಲ್ಲಾ ದೇಶಗಳಲ್ಲೂ ಅಡಿಕೆ ಬೆಳೆಯಿಂದ ಪರ್ಯಾಯ ಕೃಷಿಯತ್ತ ಜನರು ಗಮನಹರಿಸಿದ್ದಾರೆ, ದಾಖಲೆಗಳ ಪ್ರಕಾರ ಅಡಿಕೆ ಉತ್ಪಾದನೆ ಕಡಿಮೆಯಾಗುತ್ತಿದೆ ಕೆಲವು ದೇಶಗಳಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ.

Advertisement
ಅಡಿಕೆ ಉತ್ಪಾದನೆಯ ಪ್ರಗತಿ

ಭಾರತದಲ್ಲಿ ಸಣ್ಣ ಪ್ರಮಾಣದ ಬೆಳೆ ಹೊರತುಪಡಿಸಿ ಸುಮಾರು  10  ರಾಜ್ಯಗಳಲ್ಲಿ  ಅಡಿಕೆ ಬೆಳೆಯಲಾಗುತ್ತದೆ. ಅದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಶೇ.63 ರಷ್ಟು ಪ್ರಮಾಣದ ಅಡಿಕೆ ರಾಜ್ಯದಲ್ಲಿಯೇ ಬೆಳೆದರೆ ಉಳಿದಂತೆ ಕೇರಳ, ಅಸ್ಸಾಂ ಮೊದಲಾದ ರಾಜ್ಯಗಳಲ್ಲಿ  ಬೆಳೆಯಲಾಗುತ್ತಿದೆ. ಈಚೆಗೆ ತಮಿಳುನಾಡಿನಲ್ಲೂ ಗಣನೀಯ ಪ್ರಮಾಣದಲ್ಲಿ ಅಡಿಕೆ ಬೆಳೆಯಾಗುತ್ತಿದೆ.

ದೇಶದಲ್ಲಿ  ಬೆಳೆಯುವ ಅಡಿಕೆಗೆ ಸದ್ಯ ದೇಶದಲ್ಲೇ ಮಾರುಕಟ್ಟೆ ಲಭ್ಯವಿದೆ. ಉತ್ತರಭಾರತದಲ್ಲಿ , ಗುಜರಾತ್‌ ಭಾಗದಲ್ಲಿ  ಅಡಿಕೆಗೆ ಹೆಚ್ಚಿನ ಬೇಡಿಕೆ ಇದೆ. ಕೇವಲ ಅಡಿಕೆ ಜಗಿದು ತಿನ್ನುವುದಕ್ಕೆ ಬಳಕೆಯಾಗುತ್ತಿದೆ. ಚಳಿ ಪ್ರದೇಶದಲ್ಲಿ ಮೈ ಬಿಸಿಯಾಗಿಸಲು ಕೆಲವು ಮಂದಿ ಅಡಿಕೆ ಜಗಿಯುವ ಅಭ್ಯಾಸ ಮಾಡಿದ್ದಾರೆ, ಉಳಿದಂತೆ ಗುಟ್ಕಾ, ಪಾನ್‌ ಮಸಾಲಾಗಳಿಗೆ , ಪಾನ್‌ ಬೀಡಾ ಅಂಗಡಿಗಳಲ್ಲೂ ಅಡಿಕೆ ಮಾರಾಟವಾಗುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಅಡಿಕೆ ತಿನ್ನುವ ಮಂದಿ ಕಡಿಮೆಯಾಗುತ್ತಿದ್ದಾರೆ ಎನ್ನುತ್ತದೆ ಅಧ್ಯಯನ ವರದಿ.

Advertisement

ಭಾರತದ ಅಡಿಕೆ ಮಾರುಕಟ್ಟೆ ಹೊರತುಪಡಿಸಿ ಉಳಿದ ದೇಶಗಳಲ್ಲಿ  ಗುಣಮಟ್ಟ ಕಡಿಮೆ ಇರುವ ಅಡಿಕೆ ಬೆಳೆಯಲಾಗುತ್ತಿದೆ. ಅಲ್ಲಿನ ಅಡಿಕೆಗಳು ಸುಮಾರು 250  ರೂಪಾಯಿ ಆಸುಪಾಸಿಗೆ ಭಾರತದ ಮಾರುಕಟ್ಟೆಗೆ ಈ ಹಿಂದೆ ಪ್ರವೇಶ ಮಾಡುತ್ತಿತ್ತು. ಇದಕ್ಕಾಗಿ ಸರಕಾರಗಳು ಆಮದು ದರ ಏರಿಕೆ, ಆಮದು ಸುಂಕ ಏರಿಕೆ ಇತ್ಯಾದಿಗಳ ಕಾರಣದಿಂದ ಸದ್ಯ ಅಡಿಕೆ ಭಾರತಕ್ಕೆ ಆಮದು ಅಗುವ ವೇಳೆಗೆ  250  ರೂಪಾಯಿ ತಗಲುತ್ತಿತ್ತು. ಹೀಗಾಗಿ ಭಾರತದ ಅಡಿಕೆಯೂ ಅದೇ ಧಾರಣೆಯಲ್ಲಿ ಕಳೆದ ಹಲವು ಸಮಯಗಳಿಂದ ಇತ್ತು. ಈಚೆಗೆ ಕೊರೋನಾ ಲಾಕ್ಡೌನ್‌ ಕಾರಣದಿಂದ ಭಾರತದ ಅಡಿಕೆ ಮಾತ್ರಾ ಲಭ್ಯ ಇರುವುದರಿಂದ ಧಾರಣೆ ಏರಿಕೆಯಾಗಿದೆ. ಈ ಧಾರಣೆ ಸದ್ಯ ಏರಿಕೆಯಲ್ಲಿ, ಇನ್ನೂ ಏರಿಕೆಯಾಗಲಿದೆ. ಕೊರೋನಾ ಲಾಕ್ಡೌನ್‌ ನಂತರ, ಆಮದು ಪ್ರಕ್ರಿಯೆಗಳು ಸರಾಗವಾದ ಬಳಿಕ ಅಡಿಕೆ ಮಾರುಕಟ್ಟೆ ಸ್ಥಿತಿ ಏನು ಎಂದು ತಜ್ಞರು ಕೂಡಾ ಈಗ ಹೇಳುತ್ತಿಲ್ಲ.

Advertisement
ಮಾರುಕಟ್ಟೆ ಹಿಡಿತ
ಕರ್ನಾಟದಲ್ಲಿ  ಅಡಿಕೆ ಬೆಳೆಯುವ ಶೇ.10-15 ರಷ್ಟು ಮಾತ್ರವೇ ಸಹಕಾರಿ ಸಂಘಗಳ ಮೂಲಕ ಅಡಿಕೆ ಮಾರಾಟವಾಗುತ್ತಿದೆ, ಬೆಳೆಗಾರರು ಉಳಿದ ಅಷ್ಟೂ ಅಡಿಕೆ ಖಾಸಗೀ ವಲಯದ ಮೂಲಕವೇ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಅಡಿಕೆ ಮಾರುಕಟ್ಟೆ ಹಿಡಿತ ಯಾವುದೇ ಸಹಕಾರಿ ಸಂಸ್ಥೆಗಳಿಗೆ ದೀರ್ಘ ಕಾಲ ಹಿಡಿದಿಡಲೂ ಸಾಧ್ಯವೇ ಎನ್ನುವುದೂ ಪ್ರಶ್ನೆ. ಒಂದು ವೇಳೆ ಅಡಿಕೆ ಧಾರಣೆ ಅಸ್ಥಿರವಾದರೆ ಈಗಲೇ ಹಿಡಿತವಿಲ್ಲದ ಮಾರುಕಟ್ಟೆಯು ವರ್ಷದಿಂದ ವರ್ಷಕ್ಕೆ ಏರಿಕೆಯಾಗುವ ಇನ್ನಷ್ಟು ಅಡಿಕೆಯ ಕಾರಣದಿಂದ ಮಾರುಕಟ್ಟೆ ಹಿಡಿತ ಹೇಗೆ ? ಎನ್ನುವುದು  ಕೂಡಾ ಪ್ರಶ್ನೆಯಾಗಿಯೇ ಉಳಿದಿದೆ.

ಸರಕಾರಗಳು ಕೂಡಾ ಅಡಿಕೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಈಗಾಗಲೇ ನೀಡುತ್ತಿಲ್ಲ, ಅಡಿಕೆ ಬೆಳೆಯುವ ಪ್ರದೇಶದ ಬೆಳೆಗಾರರ ಮತ ಗಳಿಸಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಹಿಂದೊಮ್ಮೆ ಅಡಿಕೆ ಕೊಳೆರೋಗ ವ್ಯಾಪಕವಾಗಿ ಭಾರೀ ನಷ್ಟ ಅನುಭವಿಸಿದಾಗ ಅದೂ ಒಂದು ರಾಜಕೀಯ ಇಶ್ಯೂ ಆಗಿತ್ತು, ಅದಾದ ಇನ್ನೊಂದು ವರ್ಷ ಪರಿಹಾರವೂ ನೀಡಿತ್ತು ಸರಕಾರ. ಆ ಬಳಿಕ ಯಾವುದೇ ಸಹಕಾರಗಳೂ ಅಡಿಕೆಗೆ ಲಭ್ಯವಾಗುತ್ತಿಲ್ಲ. ಕೇವಲ ಬೆಳೆವಿಮೆ, ಸಹಾಯಧನಗಳನ್ನು ಹೊರತುಪಡಿಸಿ. ಅಡಿಕೆ ಸಂಶೋಧನಾ ಸಂಸ್ಥೆಗಳೂ ಹೊಸ ಅಧ್ಯಯನದಲ್ಲಿ  ನಿರತವಾಗಲು ಅನುದಾನಗಳೂ ಕಡಿಮೆ ಬಿಡುಗಡೆಯಾಗುತ್ತಿದೆ. ಇನ್ನೊಂದು ಕಡೆ ಅಡಿಕೆ ಮೇಲೆ ತೂಗುಗತ್ತಿ ಸದಾ ಇದೆ. ಈಗಲೂ ನ್ಯಾಯಾಲಯದಲ್ಲಿಯೇ ಆ ಪ್ರಕರಣ ಓಡಾಡುತ್ತಿದೆ. ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಸಂದೇಶ ಆಗಾಗ ಮಾಧ್ಯಮಗಳ ಮೂಲಕ ಬೆನ್ನು ಬಿಡದೆ ಕಾಡುತ್ತಿದೆ. ಆ ಸಮಯದಲ್ಲಿ  ದೊಡ್ಡ ಸುದ್ದಿಯಾಗಿ ನಂತರ ಸದ್ದಿಲ್ಲದೇ ಮರೆಯಾಗುವ ಈ ಅಂಶದ ಬಗ್ಗೆ ಇಂದಿಗೂ ಸುದೀರ್ಘ ಸಂಶೋಧನೆಯೇ ನಡೆಯಲಿಲ್ಲ. ಹೀಗಾಗಿ ಅಡಿಕೆಯ ಭವಿಷ್ಯ ಏನು ಎಂಬುದೂ ಸ್ಪಷ್ಟವಿಲ್ಲ. ಹಾಗೆಂದು ಈಗಾಗಲೇ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಅಡಿಕೆಗೆ ಪರ್ಯಾಯ ಯಾವುದೂ ಎಂಬುದೂ ದೊಡ್ಡ ಪ್ರಶ್ನೆ?.

ಇಷ್ಟೆಲ್ಲಾ ಸಂಗತಿಗಳ ನಡುವೆಯೂ ಈಗಾಗಲೇ ಭಾರತದಲ್ಲಿ ಮಾತ್ರವೇ ಹೆಚ್ಚಿನ ಪ್ರಮಾಣದಲ್ಲಿ  ಅಡಿಕೆ ಬೆಳೆಯುತ್ತಿರುವಾಗ ಮತ್ತು ವೇಗವಾಗಿ ವಿಸ್ತರಣೆಯಾಗುತ್ತಿರುವಾಗ ಅಡಿಕೆ ಬೆಳೆ ವಿಸ್ತರಣೆ ಹಾಗೂ ಅಡಿಕೆ ಮಾರುಕಟ್ಟೆ ಬಗ್ಗೆ ಚಿಂತನೆಯನ್ನು ಕೃಷಿಕರೇ ನಡೆಸಬೇಕಿದೆ. ಈಗಿನ ಮಾರುಕಟ್ಟೆ ಗಮನಿಸಿ ಕೃಷಿ ಬದಲಾವಣೆ, ರಬ್ಬರ್‌ ಕಡಿದು ಅಡಿಕೆ ಬೆಳೆ, ಬೇರೆ ಬೆಳೆ ನಾಶ ಮಾಡಿ ಅಡಿಕೆ ಬೆಳೆ ಮಾಡುವುದಕ್ಕೂ ಮುನ್ನ ಅಧ್ಯಯನ ನಡೆಸಬೇಕಿದೆ. ಸಂಸ್ಥೆಗಳು ಈ ಕಡೆಗೂ ಹೆಚ್ಚಿನ ಗಮನ ನೀಡಬೇಕಾದ ಅವಶ್ಯಕತೆ ಇದೆ.

Advertisement

ಸರಕಾರಗಳು ಕೂಡಾ ಭವಿಷ್ಯದಲ್ಲಿ ಕೃಷಿ ಕ್ಷೇತ್ರ ಉಳಿಸುವ ದೃಷ್ಟಿಯಿಂದ ಗಮನಿಸಬೇಕಾದ್ದು ಅಗತ್ಯವಿದೆ. ಇಂದು ಬಯಲುಸೀಮೆ ಹಾಗೂ ಮಲೆನಾಡಿನ ಹಲವು ಪ್ರದೇಶಗಳಲ್ಲಿ ಅಡಿಕೆ ಬೆಳೆ ಕಡೆಗೆ ಕೃಷಿ ಬದಲಾವಣೆಗೆ ಕಾರಣ, ಲಾಭದಾಯಕ ಎನ್ನುವ ಕಾರಣ ಒಂದೇ. ಖರ್ಚು, ಶ್ರಮ ಎರಡೂ ಕಡಿಮೆ ಎನ್ನುವ ಕಾರಣದಿಂದ.

ಭತ್ತ ಬೆಳೆಯುವ ರೈತ ತನ್ನ ಕೈಯಿಂದಲೇ ನಷ್ಟ ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಹೀಗೇ ನಷ್ಟವಾಗುವ ಕಾರಣದಿಂದ ಕರ್ನಾಟಕ ಮಾತ್ರವಲ್ಲ ತಮಿಳುನಾಡಿನಲ್ಲೂ ಅಡಿಕೆ ಬೆಳೆಗೆ ಶಿಪ್ಟ್‌ ಆಗುತ್ತಿರುವುದು. ಈಗ ಇಂತಹ ಕೃಷಿಕರು ತಮ್ಮ ಮನೆಗೆ ಆಗುವಷ್ಟು ಭತ್ತ ಮತ್ತು ತಮ್ಮ ಜಾನುವಾರುಗಳಿಗೆ ಬೇಕಾಗುವ ಭತ್ತದ  ಬೆಳೆದುಕೊಂಡು ಉಳಿದ ಭೂಮಿಯಲ್ಲಿ ವಾಣಿಜ್ಯ ಬೆಳೆಗಳಿಗೆ ಮೊರೆ ಹೋಗುತ್ತಿದ್ದಾರೆ.ಸಕ್ಕರೆ ಕಾರ್ಖಾನೆಗಳು ಹತ್ತಿರ ಇರುವ ಕೃಷಿ ಪ್ರದೇಶಗಳಲ್ಲಿ ಕಬ್ಬು , ಶುಂಠಿಗೆ ಬೆಳೆಯುತ್ತಿದ್ದಾರೆ. ಈಗ ವಿಸ್ತಾರವಾಗಿ ಅಡಿಕೆಯನ್ನೂ ಬೆಳೆಯುತ್ತಿದ್ದಾರೆ. ಭತ್ತದ ಗದ್ದೆಗಳು ಒಮ್ಮೆ ಅಡಿಕೆ ಅಥವಾ ಬೇರೆ ಕೃಷಿಗೆ ವರ್ಗಾವಣೆಯಾದರೆ ಅದು ದೀರ್ಘಾವಧಿ ಕೃಷಿಯಾಗುತ್ತದೆ, ನಂತರ ಯಾವುದೇ ಕಾರಣಕ್ಕೂ ಭತ್ತದ ಕೃಷಿಗೆ ಮರಳಲು ಸಾದ್ಯವಿಲ್ಲ. ಇದಕ್ಕಾಗಿ ಸರಕಾರಗಳೂ ಗಮನಿಸಬೇಕು, ಸಂಸ್ಥೆಗಳೂ ಗಮನಿಸಬೇಕು. ಸರಕಾರ ಭತ್ತ ಸೇರಿದಂತೆ ಇತರ ಬೆಳೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಮುಂದಾಗಬೇಕು.

Advertisement
ನಮ್ಮ YouTube ಚಾನೆಲ್‌ Subscribe ಮಾಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

10 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

10 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

14 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

15 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

15 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

17 hours ago