ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಏರಿಳಿಕೆಯಲ್ಲಿದ್ದ ಅಡಿಕೆ ಮಾರುಕಟ್ಟೆ ಇದೀಗ ಏರಿಕೆಯ ಹಾದಿಯಲ್ಲಿ ಸಾಗಿದೆ.ಮಂಗಳೂರು ಚಾಲಿ ಅಡಿಕೆ ಸೇರಿದಂತೆ ಕೆಂಪಡಿಕೆ ಧಾರಣೆಯಲ್ಲೂ ಏರಿಕೆ ಕಂಡಿದೆ.
ಕಳೆದ ಕೆಲವು ದಿನಗಳಿಂದ ಕುಸಿತದ ಹಾದಿಯಲ್ಲಿದ್ದ ಮಂಗಳೂರು ಚಾಲಿ ಅಡಿಕೆ ಈಗ 352-355 ರೂಪಾಯಿಗೆ ಜಿಗಿತವಾಗಿದೆ. ಇದೇ ವೇಳೆ ಹಳೆ ಚಾಲಿ ಅಡಿಕೆ ಧಾರಣೆ 420-428 ರೂಪಾಯಿಗೆ ಏರಿಕೆ ಕಂಡಿದೆ. ಅಂದರೆ ವಾರದಲ್ಲಿ ಸುಮಾರು 10 ರೂಪಾಯಿ ಧಾರಣೆಯಲ್ಲಿ ಏರಿಕೆಯಾಗಿದೆ. ಕ್ಯಾಂಪ್ಕೋ ಕೂಡ ಧಾರಣೆ ಏರಿಕೆ ಮಾಡಿದೆ.
ಇನ್ನು ಕೆಂಪಡಿಕೆ ಧಾರಣೆ ಕೂಡಾ ಏರಿಕೆಯಾಗಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂಪಾಯಿ ದಾಟಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 47,200 ರೂಪಾಯಿ ಆಗಿದೆ. ಉಳಿದಂತೆ ಎಲ್ಲೆಡೆಯೂ ಸದ್ಯ ಏರಿಕೆಯ ಹಾದಿಯಲ್ಲಿದೆ. ಸದ್ಯ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಚುನಾವಣೆಗೂ ಮುನ್ನ ಈ ಬಾರಿ ಅಡಿಕೆ ದಾಸ್ತಾನು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಅಡಿಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ನಡುವೆ ಕಳೆದ ಬಾರಿಯು ಹವಾಮಾನ ವೈಪರೀತ್ಯದ ಕಾರಣದಿಂದ ಅಡಿಕೆ ಇಳುವರಿ ಕೂಡಾ ಕಡಿಮೆಯಾಗಿರುವುದಿಂದ ಅಡಿಕೆ ಮಾರುಕಟ್ಟೆಗೆ ಬರುವ ಪ್ರಮಾಣವೂ ಕಡಿಮೆಯಾಗಿದೆ.
Arecanut Rate has increased in the state. The Arecanut market, which was in down treand for the past few days, has now gone on the path of increase. Mangalore, Puttur also saw an increase in the Market. ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…