ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

June 9, 2026
10:46 PM
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ನೇತೃತ್ವದ ನಿಯೋಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಸಚಿವರು ವಿಷಯ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶದ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಲು ಅಡಿಕೆಯ ಕನಿಷ್ಠ ಆಮದು ಬೆಲೆ (Minimum Import Price – MIP) ಹೆಚ್ಚಳ ಹಾಗೂ ಅಕ್ರಮ ಆಮದು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ನವದೆಹಲಿಯಲ್ಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನಿಯೋಗದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ , ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ, ತೀರ್ಥಹಳ್ಳಿ ಶಾಸಕ ಹಾಗೂ ಅಡಿಕೆ ಮಹಾಮಂಡಲದ ಅಧ್ಯಕ್ಷ ಅರಾಗ ಜ್ಞಾನೇಂದ್ರ, ತುಮ್ಕೋಸ್ ಅಧ್ಯಕ್ಷ ಶಿವಕುಮಾರ್, ಕ್ಯಾಂಪ್ಕೋ ದೆಹಲಿ ಶಾಖಾ ವ್ಯವಸ್ಥಾಪಕ ಬಿಪಿನ್, ಕ್ಯಾಂಪ್ಕೋ ದೆಹಲಿ ಅಧಿಕಾರಿ ಕಾವ್ಯಶ್ರೀ ಸೇರಿದಂತೆ ಹಲವು ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಸಚಿವರ ಗಮನ ಸೆಳೆದ ನಿಯೋಗ, ಕಡಿಮೆ ಬೆಲೆಯ ಅಕ್ರಮ ಆಮದುಗಳಿಂದ ದೇಶೀಯ ಮಾರುಕಟ್ಟೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದ್ದು, ರೈತರ ಆದಾಯಕ್ಕೂ ಹೊಡೆತ ಬೀಳುತ್ತಿದೆ ಎಂದು ವಿವರಿಸಿತು. ಈ ಹಿನ್ನೆಲೆಯಲ್ಲಿ ಅಡಿಕೆಯ ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವುದು ಹಾಗೂ ಅಕ್ರಮ ಆಮದು ತಡೆಗೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವುದು ಅಗತ್ಯ ಎಂದು ಮನವರಿಕೆ ಮಾಡಲಾಗಿದೆ.

ನಿಯೋಗದ ಮನವಿಯನ್ನು ಆಲಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ವಿಷಯದ ಗಂಭೀರತೆಯನ್ನು ಮನಗಂಡು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

A delegation comprising MP Srinivas Poojary, CAMPCO President S.R. Sathishchandra, CAMPCO MD Dr. B.V. Sathyanarayana, MLA Araga Jnanendra and other representatives met Union Commerce and Industry Minister Piyush Goyal in New Delhi. The delegation urged the Centre to enhance the Minimum Import Price (MIP) for arecanut and take strict action against illegal imports to safeguard the interests of domestic arecanut growers. The Minister assured the delegation that the concerns would be examined and appropriate action considered.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror