Advertisement
MIRROR FOCUS

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

Share

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಎಳೆ ಅಡಿಕೆ (ನಳ್ಳಿ) ಉದುರುವ ಸಮಸ್ಯೆ ಕಾಣಿಸಿಕೊಂಡಿದ್ದು, ಅಂದಾಜು 8 ರಿಂದ 10 ಶೇಕಡಾ ಮಟ್ಟಿಗೆ ಬೆಳ ನಷ್ಟವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಂದಾಜು ತಿಳಿಸಿದೆ.

ಅಡಿಕೆ ಬೆಳೆಯ ಸಮಸ್ಯೆಯ ಬಗ್ಗೆ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಸದನದಲ್ಲಿ “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲ ಭಾಗಗಳಲ್ಲಿ ಎಳೆ ಅಡಿಕೆ (ನಳ್ಳಿ) ಉದುರುವ ಸಮಸ್ಯೆ ಉಂಟಾಗಿದ್ದು ಅಂದಾಜು ಎಷ್ಟು ಪ್ರಮಾಣದ ಬೆಳ ನಷ್ಟವಾಗಿದ,; ಎಷ್ಟು ಪ್ರಮಾಣದ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ” ಎಂದು ಕೇಳಿರುವ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕಾ ಸಚಿವರು, ಬೆಳೆ ನಷ್ಟವಾದ ಸಂದರ್ಭಗಳಲ್ಲಿ ತೋಟಗಾರಿಕೆ ಇಲಾಖೆಯಿಂದ ನೇರ ಪರಿಹಾರ ನೀಡುವ ಕಾರ್ಯಕ್ರಮ ಇಲ್ಲದಿದ್ದರೂ, ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಅಡಿಕೆ ಬೆಳೆಯನ್ನು ಅಧಿಸೂಚಿತ ಬೆಳೆಗಳ ಪಟ್ಟಿಗೆ ಸೇರಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ನಷ್ಟ ಉಂಟಾದರೆ ವಿಮಾ ಪರಿಹಾರ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಹಾಗೂ ಅಕಾಲಿಕ ಮಳೆಯ ಪರಿಣಾಮವಾಗಿ ಹಿಂಗಾರು ಸಾಯುವುದು, ಕರಟುವುದು ಹಾಗೂ ಎಲೆಚುಕ್ಕೆ ರೋಗ ಹೆಚ್ಚುತ್ತಿರುವ ಬಗ್ಗೆ ಸಮೀಕ್ಷೆ ನಡೆಸಲಾಗಿದೆ. ತೋಟಗಾರಿಕೆ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಟ್ಟು 88,559 ಹೆಕ್ಟೇರ್ ಅಡಿಕೆ ತೋಟಗಳು ಎಲೆಚುಕ್ಕೆ ರೋಗದಿಂದ ಹಾನಿಗೊಳಗಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾವಾರು ಎಲೆಚುಕ್ಕೆ ರೋಗ ಹಾನಿ (ಹೆಕ್ಟೇರ್)

  • ಚಿಕ್ಕಮಗಳೂರು – 25,210

  • ಶಿವಮೊಗ್ಗ – 32,124

  • ಉತ್ತರ ಕನ್ನಡ – 8,730

  • ಹಾಸನ – 360

  • ದಕ್ಷಿಣ ಕನ್ನಡ – 20,830

  • ಉಡುಪಿ – 455

  • ಕೊಡಗು – 850

ಇನ್ನೊಂದೆಡೆ, ಎಲೆಚುಕ್ಕೆ ನಿಯಂತ್ರಣಕ್ಕಾಗಿ ಶಿಫಾರಸ್ಸಾಗಿರುವ ಪ್ರೋಪಿಕೊನಜೋಲ್ ಸೇರಿದಂತೆ ರಾಸಾಯನಿಕ ಸಿಂಪಡಣೆಗಳು ಜೇನು ಸಾಕಾಣಿಕೆಗೆ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ, ಜೇನು ಕೃಷಿಗೆ ಹಾನಿಯಾಗದಂತೆ ಜೈವಿಕ ಹಾಗೂ ಜೀವಾಣುನಾಶಕ ಪರ್ಯಾಯ ವಿಧಾನಗಳನ್ನು ಪರಿಗಣಿಸಿ ಶಿಫಾರಸ್ಸು ಮಾಡುವ ಉದ್ದೇಶವಿದೆ ಎಂದು ಸಂಬಂಧಿತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ ಸದ್ಯ  ಎಲೆಚುಕ್ಕಿಗೆ ಯಾವುದೇ ಬಯೋ ಅಥವಾ 100% ಗ್ಯಾರಂಟಿ ಔಷಧಿಗಳಿಲ್ಲ, ಈ ಬಗ್ಗೆ ಅಧ್ಯಯನವಾಗಿಲ್ಲ ಎಂದೂ ಪರೋಕ್ಷವಾಗಿ ತಿಳಿಸಿದೆ.

An estimated 8–10% immature arecanut nut drop has been reported in parts of Dakshina Kannada and Udupi districts. Meanwhile, leaf spot disease has affected about 88,559 hectares of arecanut plantations across Karnataka, and the government is considering biological alternatives to chemical fungicides to protect beekeeping.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

7 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

19 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

20 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

20 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

20 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

20 hours ago