ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಪುತ್ತೂರಿನ ಬಲ್ನಾಡಿನಲ್ಲಿ ಉದ್ಘಾಟನೆ ಗೊಂಡಿತು.
ಪುತ್ತೂರಿನ ಬಲ್ನಾಡು ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರ ತೋಟದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್ ಕಿಶೋರ್ ಮಂಚಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಸರಗೋಡು ಸಿಪಿಸಿಆರ್‌ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಹೆಗಡೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಲ್ನಾಡು ಗ್ರಾಪಂ ಅಧ್ಯಕ್ಷೆ ಇಂದಿರಾ ಎಸ್ ರೈ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ , ಕೃಷಿಕ ಸುರೇಶ್ ಬಲ್ನಾಡು ಉಪಸ್ಥಿತರಿದ್ದರು.
ಗೋಪಾಲ ಗೌಡ ಬಲ್ನಾಡು ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಅಡಿಕೆ ಕೃಷಿಯಲ್ಲಿ ಪೋಷಕಾಂಶ ನಿರ್ವಹಣೆ, ಎಲೆ ಚುಕ್ಕೆ ರೋಗ, ಹಿಂಗಾರು ಒಣಗಿಸುವ ರೋಗ ಪತ್ತೆ ಮತ್ತು ನಿರ್ವಹಣೆ, ಕೀಟ ನಿರ್ವಹಣೆ, ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಅಡಿಕೆ ಕೃಷಿಯಲ್ಲಿ ಕೃಷಿ ಅನುಭವ ಸೇರಿದಂತೆ ನಾನಾ ಮಾಹಿತಿ ನಡೆಯಿತು.
ವಿಟ್ಲ ಸಿಪಿಸಿಆರ್ ಐ ಮತ್ತು ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…