Advertisement
MIRROR FOCUS

ಕಳಪೆ ಅಡಿಕೆ ದಾಸ್ತಾನು ಶಂಕೆ – ನಾಗಪುರದಲ್ಲಿ 10 ವ್ಯಾಪಾರಿಗಳ ಗೋದಾಮು ಮೇಲೆ ದಾಳಿ | ₹4 ಕೋಟಿ ಮೌಲ್ಯದ ಅಡಿಕೆ ಜಪ್ತಿ

Share

ಇಂಡೋನೇಷಿಯಾದಿಂದ ಭಾರತಕ್ಕೆ ಆಮದು ಮಾಡಲಾದ ಕಳಪೆ ಗುಣಮಟ್ಟದ ಅಡಿಕೆಯನ್ನು ನಿಯಮ ಉಲ್ಲಂಘನೆ ಮಾಡಿ ಹಾಗೂ ಕಳಪೆ ಗುಣಮಟ್ಟದ  ಶಂಕೆಯ ಹಿನ್ನೆಲೆಯಲ್ಲಿ ನಾಗಪುರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೈನಿಕ್‌ ಭಾಸ್ಕರ್‌ ವರದಿ ಮಾಡಿದೆ.

ಭಾರತದ ಕಂದಾಯ ಗುಪ್ತಚರ ನಿರ್ದೇಶಾಲಯ (DRI) ಮತ್ತು ಆದಾಯ ತೆರಿಗೆ ಇಲಾಖೆಯ ತನಿಖೆಯ ಮುಂದುವರಿದ ಭಾಗವಾಗಿ ಮಹಾರಾಷ್ಟ್ರದ  ಆಹಾರ ಮತ್ತು ಔಷಧಿ ಆಡಳಿತ (FDA) ತಂಡವು ನಾಗಪುರದ ವಿವಿಧ ಪ್ರದೇಶಗಳಲ್ಲಿ 10 ಅಡಿಕೆ ವ್ಯಾಪಾರಿಗಳ ಗೋದಾಮು ಮೇಲೆ ದಾಳಿ ನಡೆಸಿದ್ದು, ಸುಮಾರು ₹4 ಕೋಟಿ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದಿದೆ.

ಕೆಲವು ದಿನಗಳ ಹಿಂದೆ ಇಂಡೋನೇಷಿಯಾದಿಂದ ನಿಯಮ ಉಲ್ಲಂಘಿಸಿ ಅಡಿಕೆ ಆಮದು ಮಾಡಲಾಗಿದೆ ಎಂಬ ಮಾಹಿತಿ ಆಧರಿಸಿ DRI ತನಿಖೆ ಆರಂಭಿಸಿತ್ತು. ತನಿಖೆ ವೇಳೆ ತೆರಿಗೆ ತಪ್ಪಿಸುವಿಕೆ, ನಕಲಿ ದಾಖಲೆಗಳ ಬಳಕೆ ಹಾಗೂ ಮೌಲ್ಯ ಕಡಿಮೆ ತೋರಿಸಿ ಅಡಿಕೆ ಸಾಗಾಟ ಸೇರಿದಂತೆ ಹಲವು ಅಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ನಂತರ ಆದಾಯ ತೆರಿಗೆ ಇಲಾಖೆ ಕೂಡ ಸಂಬಂಧಿತ ವ್ಯಾಪಾರಿಗಳ ಲೆಕ್ಕಪತ್ರಗಳ ಪರಿಶೀಲನೆ ಕೈಗೊಂಡಿತ್ತು. ಇದರ ಮುಂದುವರಿದ ಭಾಗವಾಗಿ FDA ಆಹಾರ ಸುರಕ್ಷತೆ ದೃಷ್ಟಿಯಿಂದ ದಾಳಿ ಆರಂಭಿಸಿದೆ. ಅಡಿಕೆ ಕೂಡಾ ಕಳಪೆ ಎಂದು ವರದಿಯಾಗಿತ್ತು.

ಜನವರಿ 19ರಂದು ನಾಗಪುರದ ಕಲ್ಮನಾ ಪ್ರದೇಶದಲ್ಲಿರುವ ಎರಡು ಗೋದಾಮುಗಳಿಂದ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆದರೆ,  ಜನವರಿ 20 ಹಾಗೂ 21ರಂದು ಕೂಡಾ ದಾಳಿ ನಡೆಸಲಾಗಿತ್ತು. ಈ ಸಂದರ್ಭ ಸುಮಾರು 2 ಕೋಟಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿದೆ. ಈ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

FDA ನಾಗಪುರ ವಿಭಾಗದ ಸಹ ಆಯುಕ್ತ ಕೆ.ಆರ್. ಜಯ್‌ಪುರ್ಕರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, “ಮುಂಬೈ ಹಾಗೂ ನಾಗಪುರ ಪ್ರದೇಶಗಳಿಗೆ ಕಳಪೆ ಗುಣಮಟ್ಟದ ಅಡಿಕೆ ಬಂದಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಲಾಗಿದೆ. ವಶಪಡಿಸಿಕೊಂಡ ಅಡಿಕೆಯ  ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು. ಆಹಾರ ಗುಣಮಟ್ಟಕ್ಕೆ ಸೂಕ್ತವಲ್ಲ ಅಥವಾ ಮಾನವ ಸೇವನೆಗೆ ಯೋಗ್ಯವಲ್ಲ ಎಂದು ದೃಢಪಟ್ಟರೆ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

18 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

23 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

23 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

23 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

23 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago