Advertisement
MIRROR FOCUS

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

Share

ಮಳೆಗಾಲ ಆರಂಭವಾಗುತ್ತಿದ್ದಂತೆಯೇ ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆ ಬೆಳೆ ವಿಸ್ತರಣೆ ವೇಗವಾಗಿ ನಡೆಯುತ್ತಿದ್ದು, ಈ ಬಾರಿಯೂ ರೈತರು ಹೊಸ ತೋಟಗಳ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಅಡಿಕೆ ಬೆಳೆ ವಿಸ್ತರಣೆ  ಹೆಚ್ಚಾಗುತ್ತಿದೆ. ದೇಶದಾದ್ಯಂತ ಸುಮಾರು 2 ಲಕ್ಷ ಹೆಕ್ಟೇರ್‌  ಪ್ರದೇಶದಲ್ಲಿ ಅಡಿಕೆ ಗಿಡ ನಾಟಿಯಾಗುತ್ತಿದೆ. ಅಂದರೆ ಸುಮಾರು  10 ಕೋಟಿ ಗಿಡಗಳ ನಾಟಿಯಾಗುತ್ತಿದೆ. ಈ ಬಾರಿಯೂ ಅಡಿಕೆ ಗಿಡಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಯಲು ಸೀಮೆ, ಕಡಿಮೆ ನೀರು ಇರುವ ಪ್ರದೇಶದಲ್ಲಿ ಬೆಳೆಯುವ ಅಡಿಕೆ ಗಿಡಗಳಿಗೆ ಬೇಡಿಕೆ ಇದ್ದು ವಿಶೇಷವಾಗಿ ನಾಟಿ ಅಡಿಕೆ ಗಿಡಗಳು, ಮೋಹಿತ್‌ ನಗರ್‌, ರತ್ನಗಿರಿ , ಮಂಗಳ, ಶತಮಂಗಳ ತಳಿಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ರಾಜ್ಯದ ಅಡಿಕೆ ಬೆಳೆಯುವ ಪ್ರದೇಶಗಳಾದ ದಾವಣಗೆರೆ ಜಿಲ್ಲೆಯ ಚನ್ನಗಿರಿ,  ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು, ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ವಿಶೇಷವಾಗಿ ಅಡಿಕೆ ಗಿಡಗಳಿಗೆ ಬೇಡಿಕೆ ಬರುತ್ತಿದೆ. ಅಡಿಕೆಗೆ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆ ಹೊಸ ತೋಟಗಳನ್ನು ನಿರ್ಮಿಸಲು ರೈತರು ಮುಂದಾಗಿದ್ದು, ಇದರ ಪರಿಣಾಮವಾಗಿ ಅಡಿಕೆ ಸಸಿಗಳ ದರವೂ ಏರಿಕೆಯಾಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಸುಮಾರು 54 ಸಾವಿರ ಹೆಕ್ಟೇರ್ ಕೃಷಿ ಭೂಮಿ ಇದ್ದು, ಅದರಲ್ಲಿ 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದೆ. ಆದರೆ ಕಳೆದ ಒಂದು ದಶಕದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಗಣನೀಯವಾಗಿ ಹೆಚ್ಚಾಗಿದೆ. 10 ವರ್ಷಗಳ ಹಿಂದೆ 30 ಸಾವಿರ ಹೆಕ್ಟೇರ್ ಇದ್ದ ಅಡಿಕೆ ಪ್ರದೇಶ ಇದೀಗ 39 ಸಾವಿರ ಹೆಕ್ಟೇರ್‌ಗೆ ಏರಿಕೆಯಾಗಿದೆ ಎಂದು ಕೃಷಿ ಇಲಾಖೆಯ ಅಂಕಿಅಂಶಗಳು ತಿಳಿಸಿವೆ ಎಂದು ಪ್ರಜಾವಾಣಿ ಪತ್ರಿಕೆ ವರದಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂಗಾರು ಆರಂಭವಾಗುತ್ತಿದ್ದಂತೆ ಅಡಿಕೆ ಸಸಿ ನೆಡುವ ಕಾಲ ಶುರುವಾಗುತ್ತದೆ. ಹೀಗಾಗಿ ಕಳೆದ ಕೆಲವು ವಾರಗಳಿಂದ ರೈತರು ಅಡಿಕೆ ಸಸಿಗಳನ್ನು ಮುಂಚಿತವಾಗಿಯೇ ಖರೀದಿಸಿ ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಇದರ ಪರಿಣಾಮವಾಗಿ ಒಂದು ಅಡಿಕೆ ಸಸಿಯ ಬೆಲೆ ₹70 ರಿಂದ ₹100ರವರೆಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಚನ್ನಗಿರಿ ಪ್ರದೇಶದ ಅಡಿಕೆ ಸಸಿ ಉತ್ಪಾದಕರು ಹೇಳುತ್ತಿದ್ದಾರೆ.

ಅಡಿಕೆಗೆ ದೇಶಾದ್ಯಂತ ಹೆಚ್ಚುತ್ತಿರುವ ಬೇಡಿಕೆ, ಉತ್ತಮ ಬೆಲೆ ಹಾಗೂ ಕೃಷಿಕರಿಗೆ ದೊರೆಯುತ್ತಿರುವ ಲಾಭದಾಯಕ ಆದಾಯವೇ ಈ ಪ್ರವೃತ್ತಿಗೆ ಪ್ರಮುಖ ಕಾರಣವಾಗಿದೆ. ಭಾರತ ವಿಶ್ವದ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಕರ್ನಾಟಕ ದೇಶದ ಅಗ್ರ ಅಡಿಕೆ ಉತ್ಪಾದಕ ರಾಜ್ಯವಾಗಿದೆ.

ಜಾಹೀರಾತು

Demand for arecanut seedlings has surged across Karnataka with the onset of monsoon. Around 10 crore arecanut seedlings are expected to be planted across 2 lakh hectares nationwide. Rising arecanut prices and profitable returns are encouraging farmers to expand plantations, pushing seedling prices up to ₹100 each.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 hour ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

8 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

8 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

8 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

18 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago