ಪುತ್ತೂರು | ಜ.4 ರಂದು ಅಡಿಕೆ ಬೆಳೆಗಾರರ ಜಿಲ್ಲಾ ಮಟ್ಟದ ಹಕ್ಕೊತ್ತಾಯ ಸಮಾವೇಶ

December 30, 2022
10:29 AM

ಒಂದೆಡೆ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿರುವ ನಡುವೆಯೇ, ಮತ್ತೊಂದೆಡೆ ಅಡಿಕೆ ಬೆಳೆಗೆ ನಾನಾ ರೀತಿಯ ಸಂಕಟಗಳು ಎದುರಾಗುತ್ತಿದ್ದು, ಬೆಳೆಗಾರರು ಆತಂಕಕ್ಕೆ ತುತ್ತಾಗಿದ್ದಾರೆ. ಉತ್ತಮ ಧಾರಣೆಯ ಖುಷಿಯ ನಡುವೆಯೂ ರೋಗ ರುಜಿನ ಹಾಗೂ ಬೆಳೆ ನಿಷೇಧದ ತೂಗುಕತ್ತಿ ನೇತಾಡುತ್ತಿದ್ದು ರೈತರನ್ನು ವಸ್ತುಶಃ ಭೀತಿಗೆ ತಳ್ಳುತ್ತಿದೆ.

ಈ ವಿಷಮ ಪರಿಸ್ಥಿತಿಯಲ್ಲಿ ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬಲು ಮತ್ತು ಬೆಳೆಗಾರರ ಮನದಾಳದ ದುಗುಡ ಹಾಗೂ ಹಕ್ಕೊತ್ತಾಯಗಳನ್ನು ಸಮರ್ಥವಾಗಿ ಸರಕಾರದ ಮುಂದಿಡಲು ವಿಜಯ ಕರ್ನಾಟಕ ಪತ್ರಿಕೆ ಮುಂದಾಗಿದೆ.ಈ ನಿಟ್ಟಿನಲ್ಲಿ ಜನವರಿ 4ರಂದು ಬುಧವಾರ ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಸಂಘಟಿಸಿದೆ.ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಹಕ್ಕೊತ್ತಾಯ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಇಲಾಖಾ ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಸರಕಾರದ ಪ್ರತಿನಿಧಿಗಳು, ಬೆಳೆಗಾರ ಸಂಸ್ಥೆಗಳ ಮುಖಂಡರು, ನಾನಾ ರೈತ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ರೈತರು ತಮ್ಮ ಅಹವಾಲು, ದುಗುಡ, ಬೇಡಿಕೆ, ಮುನ್ನೋಟಗಳನ್ನು ಮಂಡಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಳದಿ ರೋಗ, ಎಲೆ ಚುಕ್ಕಿ ರೋಗ, ಪರಿಹಾರ ಕ್ರಮಗಳು, ಪರ್ಯಾಯ ಮಾರ್ಗೋಪಾಯಗಳು, ಸರಕಾರದಿಂದ ಸಿಗುವ ಉತ್ತೇಜನಗಳು, ಸರಕಾರ ಕೈಗೊಳ್ಳಬೇಕಾದ ಕ್ರಮಗಳನ್ನು ಮಂಡಿಸಲಾಗುತ್ತದೆ. ವಿಜ್ಞಾನಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳು ರೈತರ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ರೈತ ಸಂಸ್ಥೆಗಳು ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲು ಅವಕಾಶವಿದೆ.ಸಮಾವೇಶದಲ್ಲಿ ಸಮಗ್ರವಾಗಿ ನಿರ್ಣಯ ಅಂಗೀಕರಿಸಿ ಅದನ್ನು ಸರಕಾರಕ್ಕೆ ತಲುಪಿಸಲಾಗುತ್ತದೆ.

ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ 2019ರಲ್ಲಿ ಅಡಿಕೆ ಬೆಳೆಯುವ ಜಿಲ್ಲೆಗಳಲ್ಲಿ ಸರಣಿ ಸಮಾವೇಶ ನಡೆಸಿ ಸರಕಾರಕ್ಕೆ ಹಕ್ಕೊತ್ತಾಯ ಮಂಡಿಸಿದ ಫಲವಾಗಿ ಅಡಿಕೆ ಕಾರ್ಯಪಡೆ ರಚನೆಯೂ ಸೇರಿದಂತೆ ಅನೇಕ ಉಪಕ್ರಮಗಳನ್ನು ಸರಕಾರ ಕೈಗೊಂಡಿತ್ತು. ಇದೀಗ ಮತ್ತೊಮ್ಮೆ ಅಡಿಕೆ ಬೆಳೆಗಾರ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ವಿಜಯ ಕರ್ನಾಟಕ ಬೆಳೆಗಾರರ ಪರ ನಿಂತಿದೆ.

ದ.ಕ. ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಜಿಲ್ಲೆಯ ಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯ ಆರ್ಥಿಕ ಬೆನ್ನೆಲುಬಾದ ಅಡಿಕೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೈಜೋಡಿಸಬೇಕೆಂದು ವಿನಂತಿಸಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror