ಅಕ್ರಮವಾಗಿ ಅಡಿಕೆ ಸಾಗಾಣಿಕೆ | 460 ಚೀಲ ಅಡಿಕೆ ವಶಕ್ಕೆ | ವಿಮಾನದ ಮೂಲಕ ಅಸ್ಸಾಂನಿಂದ ಬರುತ್ತಿರುವ ಅಡಿಕೆ…! |

December 3, 2023
11:29 PM
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಬೆಂಗಳೂರಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳಿ ಪತ್ತೆ ಮಾಡಿದ್ದಾರೆ.

ಈಶಾನ್ಯ ರಾಜ್ಯಗಳಿಂದ ವಿಮಾನದ ಮೂಲಕ ಅಡಿಕೆಯ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ವಾರದ ಹಿಂದಷ್ಟೇ ಕ್ಯಾಂಪ್ಕೋ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಗಳಿಗೆ ಪತ್ರ ಬರೆದಿತ್ತು. ಇದೀಗ ಮತ್ತೆ ಅಧಿಕೃತವಾಗಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಡಿಕೆ ಕಳ್ಳಸಾಗಾಣಿಕೆಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದಾರೆ.ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ 11,500 ಕೆಜಿ ತೂಕದ 460 ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.

Advertisement

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಜ್ಯ ಅಡಿಕೆ ಸಾಗಣೆ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಅಡಿಕೆ ಎಂದು ತಿಳಿದುಬಂದಿದೆ. ಈಶಾನ್ಯ ಭಾಗದಿಂದ, ಅಂದರೆ ಅಸ್ಸಾಂ ಮತ್ತು ಮಣಿಪುರದಿಂದ ಈ ಅಡಿಕೆ ರವಾನೆಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಿಲ್‌ಗಳಲ್ಲಿ ವ್ಯಕ್ತಿಗಳ ಹೆಸರುಗಳು ಮತ್ತು ಅವರ ಮೊಬೈಲ್ ಸಂಖ್ಯೆಗಳು ಇದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ವ್ಯಾಪಾರಿಗಳು ಎಂದು ತಿಳಿದುಬಂದಿದ್ದು, ಅವರು ನಾಪತ್ತೆಯಾಗಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಅಸ್ಸಾಂ, ಮಣಿಪುರ ಬಂದು ಅಲ್ಲಿಂದ ನಂತರ ವಿಮಾನದ ಮೂಲಕ ಬೇಕಾದ ಸ್ಥಳಗಳಿಗೆ ರವಾನೆಯಾಗುತಿತ್ತು.  ಹೀಗೆ ಬಂದ ಅಡಿಕೆಯನ್ನು ಇಲ್ಲಿನ ಅಡಿಕೆಯ ಜೊತೆ ಬೆರೆಸಿ ಮತ್ತೆ ಮಾರುಕಟ್ಟೆಗೆ ಬಿಡುವ ಪ್ರಯತ್ನ ನಡೆಯುತ್ತಿದೆ. ಕಳೆದ ತಿಂಗಳು ಹಡಗಿನ ಮೂಲಕ ಬಂದಿರುವ ಅಡಿಕೆಯನ್ನೂ ಅಧಿಕಾರಿಗಳು ಪತ್ತೆ ಮಾಡಿದ್ದರು.  ಪ್ರತೀ ಸಂದರ್ಭದಲ್ಲಿ ಕಳ್ಳ ಸಾಗಾಣಿಕೆದಾರರು ರೈತರ ಹೆಸರಿನಲ್ಲಿ ಸಾಗಾಟ ಮಾಡಿ ಇಲ್ಲಿಯ ಅಡಿಕೆ ಜೊತೆ ಬೆರೆಸಿ ಇಲ್ಲಿಯೂ ರೈತರ ಹೆಸರಿನಲ್ಲಿ ಸಂಸ್ಥೆಗಳಿ ಮಾರಾಟ ಮಾಡುತ್ತಿರುವುದು ಈ ಹಿಂದೆ ಬೆಳಕಿಗೆ ಬಂದಿತ್ತು.

ಅಕ್ರಮ ಸಾಗಾಟ ಹಿನ್ನೆಲೆಯಲ್ಲಿ ಹಾಗೂ ತೆರಿಗೆ ವಂಚನೆಯ ಹಿನ್ನೆಲೆಯಲ್ಲಿ  ಕೆಜಿಎಸ್‌ಟಿ ಕಾಯ್ದೆಯ ಪ್ರಕಾರ  24 ಲಕ್ಷ ರೂಪಾಯಿ  ದಂಡವನ್ನು ವಿಧಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |
April 16, 2025
8:14 AM
by: The Rural Mirror ಸುದ್ದಿಜಾಲ
ಹೊಸರುಚಿ| ಗುಜ್ಜೆ ರೋಲ್
April 16, 2025
8:00 AM
by: ದಿವ್ಯ ಮಹೇಶ್
ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |
April 16, 2025
7:52 AM
by: The Rural Mirror ಸುದ್ದಿಜಾಲ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |
April 16, 2025
7:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group