ಈಶಾನ್ಯ ರಾಜ್ಯಗಳಿಂದ ವಿಮಾನದ ಮೂಲಕ ಅಡಿಕೆಯ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ವಾರದ ಹಿಂದಷ್ಟೇ ಕ್ಯಾಂಪ್ಕೋ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿಗಳಿಗೆ ಪತ್ರ ಬರೆದಿತ್ತು. ಇದೀಗ ಮತ್ತೆ ಅಧಿಕೃತವಾಗಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಡಿಕೆ ಕಳ್ಳಸಾಗಾಣಿಕೆಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದಾರೆ.ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ 11,500 ಕೆಜಿ ತೂಕದ 460 ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತರರಾಜ್ಯ ಅಡಿಕೆ ಸಾಗಣೆ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಈಶಾನ್ಯ ರಾಜ್ಯಗಳಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಅಡಿಕೆ ಎಂದು ತಿಳಿದುಬಂದಿದೆ. ಈಶಾನ್ಯ ಭಾಗದಿಂದ, ಅಂದರೆ ಅಸ್ಸಾಂ ಮತ್ತು ಮಣಿಪುರದಿಂದ ಈ ಅಡಿಕೆ ರವಾನೆಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಿಲ್‌ಗಳಲ್ಲಿ ವ್ಯಕ್ತಿಗಳ ಹೆಸರುಗಳು ಮತ್ತು ಅವರ ಮೊಬೈಲ್ ಸಂಖ್ಯೆಗಳು ಇದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ವ್ಯಾಪಾರಿಗಳು ಎಂದು ತಿಳಿದುಬಂದಿದ್ದು, ಅವರು ನಾಪತ್ತೆಯಾಗಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯು ಕಳ್ಳದಾರಿಯ ಮೂಲಕ ಅಸ್ಸಾಂ, ಮಣಿಪುರ ಬಂದು ಅಲ್ಲಿಂದ ನಂತರ ವಿಮಾನದ ಮೂಲಕ ಬೇಕಾದ ಸ್ಥಳಗಳಿಗೆ ರವಾನೆಯಾಗುತಿತ್ತು. ಹೀಗೆ ಬಂದ ಅಡಿಕೆಯನ್ನು ಇಲ್ಲಿನ ಅಡಿಕೆಯ ಜೊತೆ ಬೆರೆಸಿ ಮತ್ತೆ ಮಾರುಕಟ್ಟೆಗೆ ಬಿಡುವ ಪ್ರಯತ್ನ ನಡೆಯುತ್ತಿದೆ. ಕಳೆದ ತಿಂಗಳು ಹಡಗಿನ ಮೂಲಕ ಬಂದಿರುವ ಅಡಿಕೆಯನ್ನೂ ಅಧಿಕಾರಿಗಳು ಪತ್ತೆ ಮಾಡಿದ್ದರು. ಪ್ರತೀ ಸಂದರ್ಭದಲ್ಲಿ ಕಳ್ಳ ಸಾಗಾಣಿಕೆದಾರರು ರೈತರ ಹೆಸರಿನಲ್ಲಿ ಸಾಗಾಟ ಮಾಡಿ ಇಲ್ಲಿಯ ಅಡಿಕೆ ಜೊತೆ ಬೆರೆಸಿ ಇಲ್ಲಿಯೂ ರೈತರ ಹೆಸರಿನಲ್ಲಿ ಸಂಸ್ಥೆಗಳಿ ಮಾರಾಟ ಮಾಡುತ್ತಿರುವುದು ಈ ಹಿಂದೆ ಬೆಳಕಿಗೆ ಬಂದಿತ್ತು.
ಅಕ್ರಮ ಸಾಗಾಟ ಹಿನ್ನೆಲೆಯಲ್ಲಿ ಹಾಗೂ ತೆರಿಗೆ ವಂಚನೆಯ ಹಿನ್ನೆಲೆಯಲ್ಲಿ ಕೆಜಿಎಸ್‌ಟಿ ಕಾಯ್ದೆಯ ಪ್ರಕಾರ 24 ಲಕ್ಷ ರೂಪಾಯಿ ದಂಡವನ್ನು ವಿಧಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…