ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

March 31, 2025
9:38 PM
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ದಾಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. (Source :IANS)

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಹೆಚ್ಚುತ್ತಿದೆ. ಕಳೆದ ವಾರವಷ್ಟೇ ಬೃಹತ್‌ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್, ಕಸ್ಟಮ್ಸ್  ಜಂಟಿ ಕಾರ್ಯಾಚರಣೆಯಲ್ಲಿ 1.79 ಕೋಟಿ ರೂ. ಮೌಲ್ಯದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.……..ಮುಂದೆ ಓದಿ…..

ಚಂಫೈ ಜಿಲ್ಲೆಯ ಜೊಟೆ-ಟ್ಲಾಂಗ್ಸಮ್ ಕ್ರಾಸಿಂಗ್ ಪಾಯಿಂಟ್ ಬಳಿಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ದಾಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಭಾರತದ ಇತರ ಭಾಗಗಳಿಗೆ ಸಾಗಿಸುವ ಉದ್ದೇಶದಿಂದ ಕಾಡಿನಲ್ಲಿ ದಾಸ್ತಾನು ಮಾಡಿ ನಂತರ ಲಾರಿಗಳಲ್ಲಿ ತುಂಬಿ ಸಾಗಾಣಿಕೆ ಮಾಡಲಾಗುತ್ತದೆ.ಕಳೆದ ವಾರ ಅಂದರೆ ಮಾ.21 ರಂದು ಇದೇ ಮಾದರಿಯಲ್ಲಿ ಅಡಿಕೆ ಪತ್ತೆಯಾಗಿತ್ತು. ಅಂದು  1.08 ಕೋಟಿ ರೂ. ಮೌಲ್ಯದ ಅಡಿಕೆ ವಶಪಡಿಸಿಕೊಂಡಿದ್ದರು. ಮ್ಯಾನ್ಮಾರ್‌ನಿಂದ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆಯಾಗುತ್ತಿರುವುದು ಅಸ್ಸಾಂ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಅಲ್ಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ. ಇದರ ಜೊತೆಗೆ ಇತರ ಕಡೆಯ ಅಡಿಕೆಯ ಮೇಲೂ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror