ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಹೆಚ್ಚುತ್ತಿದೆ. ಕಳೆದ ವಾರವಷ್ಟೇ ಬೃಹತ್ ಪ್ರಮಾಣದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಇನ್ನೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಜಂಟಿ ಕಾರ್ಯಾಚರಣೆಯಲ್ಲಿ 1.79 ಕೋಟಿ ರೂ. ಮೌಲ್ಯದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.……..ಮುಂದೆ ಓದಿ…..
ಚಂಫೈ ಜಿಲ್ಲೆಯ ಜೊಟೆ-ಟ್ಲಾಂಗ್ಸಮ್ ಕ್ರಾಸಿಂಗ್ ಪಾಯಿಂಟ್ ಬಳಿಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ದಾಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾದ ಅಡಿಕೆಗಳನ್ನು ಭಾರತದ ಇತರ ಭಾಗಗಳಿಗೆ ಸಾಗಿಸುವ ಉದ್ದೇಶದಿಂದ ಕಾಡಿನಲ್ಲಿ ದಾಸ್ತಾನು ಮಾಡಿ ನಂತರ ಲಾರಿಗಳಲ್ಲಿ ತುಂಬಿ ಸಾಗಾಣಿಕೆ ಮಾಡಲಾಗುತ್ತದೆ.ಕಳೆದ ವಾರ ಅಂದರೆ ಮಾ.21 ರಂದು ಇದೇ ಮಾದರಿಯಲ್ಲಿ ಅಡಿಕೆ ಪತ್ತೆಯಾಗಿತ್ತು. ಅಂದು 1.08 ಕೋಟಿ ರೂ. ಮೌಲ್ಯದ ಅಡಿಕೆ ವಶಪಡಿಸಿಕೊಂಡಿದ್ದರು. ಮ್ಯಾನ್ಮಾರ್‌ನಿಂದ ದೊಡ್ಡ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಣೆಯಾಗುತ್ತಿರುವುದು ಅಸ್ಸಾಂ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಅಲ್ಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತದೆ. ಇದರ ಜೊತೆಗೆ ಇತರ ಕಡೆಯ ಅಡಿಕೆಯ ಮೇಲೂ ಪರಿಣಾಮ ಬೀರುತ್ತಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…