ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

April 16, 2026
7:25 AM
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ ವಶಪಡಿಸಲಾಯಿತು. ಕರಾವಳಿ ಕಾವಲು ಪಡೆ ಕಾರ್ಯಾಚರಣೆಯಲ್ಲಿ ಎರಡು ದೋಣಿಗಳನ್ನು ತಡೆದು ಪರಿಶೀಲನೆ ನಡೆಸಿತು.

ಒಡಿಶಾ ಕರಾವಳಿಯಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ 710 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಸುಮಾರು ₹1.5 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.

ಮಂಗಳವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿದ ಕರಾವಳಿ ಕಾವಲು ಪಡೆ, ‘ಮಾ ಆಯೇಷಾ ಎಲ್’ ಮತ್ತು ‘ಮಾ ಆಯೇಷಾ ಎಲ್ ಐ’ ಎಂಬ ಎರಡು ಭಾರತೀಯ ಮೀನುಗಾರಿಕಾ ದೋಣಿಗಳನ್ನು ಪರಿಶೀಲನೆ ನಡೆಸಿತು. ಈ ವೇಳೆ ಸುಮಾರು 710 ಗೋಣಿ ಚೀಲಗಳ ಅಡಿಕೆ ಪತ್ತೆಯಾಯಿತು. ಪಶ್ಚಿಮ ಬಂಗಾಳದಲ್ಲಿ ನೋಂದಾಯಿತವಾಗಿದ್ದ ಈ ದೋಣಿಗಳು ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅಡಿಕೆಯನ್ನು ಸಾಗಿಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೋಣಿಗಳು ಮತ್ತು ಸಿಬ್ಬಂದಿಯನ್ನು ಒಡಿಶಾದ ಬಾಲಸೋರ್‌ನಲ್ಲಿರುವ ಕಸಾಫಲ್ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕಸಾಫಲ್ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ಮತ್ತು ಒಡಿಶಾ ಸಾಗರ ಪೊಲೀಸರ ಸಂಯುಕ್ತ ಕಾರ್ಯಾಚರಣೆ ಸಮುದ್ರದ ಭದ್ರತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.

ಸಮುದ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು 24 ಗಂಟೆಗಳ ಜಾಗರೂಕತೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror