ಒಡಿಶಾ ಕರಾವಳಿಯಲ್ಲಿ ಎರಡು ಮೀನುಗಾರಿಕಾ ದೋಣಿಗಳಿಂದ 710 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆಯನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಸುಮಾರು ₹1.5 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಮಂಗಳವಾರ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿದ ಕರಾವಳಿ ಕಾವಲು ಪಡೆ, ‘ಮಾ ಆಯೇಷಾ ಎಲ್’ ಮತ್ತು ‘ಮಾ ಆಯೇಷಾ ಎಲ್ ಐ’ ಎಂಬ ಎರಡು ಭಾರತೀಯ ಮೀನುಗಾರಿಕಾ ದೋಣಿಗಳನ್ನು ಪರಿಶೀಲನೆ ನಡೆಸಿತು. ಈ ವೇಳೆ ಸುಮಾರು 710 ಗೋಣಿ ಚೀಲಗಳ ಅಡಿಕೆ ಪತ್ತೆಯಾಯಿತು. ಪಶ್ಚಿಮ ಬಂಗಾಳದಲ್ಲಿ ನೋಂದಾಯಿತವಾಗಿದ್ದ ಈ ದೋಣಿಗಳು ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅಡಿಕೆಯನ್ನು ಸಾಗಿಸುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೋಣಿಗಳು ಮತ್ತು ಸಿಬ್ಬಂದಿಯನ್ನು ಒಡಿಶಾದ ಬಾಲಸೋರ್‌ನಲ್ಲಿರುವ ಕಸಾಫಲ್ ಮೀನುಗಾರಿಕಾ ಬಂದರಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕಸಾಫಲ್ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಭಾರತೀಯ ಕರಾವಳಿ ರಕ್ಷಣಾ ಪಡೆ ಮತ್ತು ಒಡಿಶಾ ಸಾಗರ ಪೊಲೀಸರ ಸಂಯುಕ್ತ ಕಾರ್ಯಾಚರಣೆ ಸಮುದ್ರದ ಭದ್ರತೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.
ಸಮುದ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು 24 ಗಂಟೆಗಳ ಜಾಗರೂಕತೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…