ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ | ಅಡಿಕೆ ಮೌಲ್ಯವರ್ಧನೆ ಅನಿವಾರ್ಯತೆ ಇದೆ | ಶಿವಮೊಗ್ಗದಲ್ಲಿ ನಡೆದ ಕಾರ್ಯಾಗಾರದಲ್ಲಿ ಅಭಿಮತ |

October 11, 2023
9:24 PM
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲಿ ಅಡಕೆಯ ಪರ್ಯಾಯ ಬಳಕೆ ಹಾಗೂ ಮೌಲ್ಯವರ್ಧನೆಯ ಕುರಿತಾದ ಕಾರ್ಯಾಗಾರ ನಡೆಯಿತು.

ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.ಈಗಲೂ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬಳಕೆಯ ಕಡೆಗೆ, ಅಡಿಕೆ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಬೇಕಿದೆ ಎಂದು ಅಭಿಪ್ರಾಯಪಡಲಾಗಿದೆ.

Advertisement

ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ ಶಿವಮೊಗ್ಗ ಹಾಗೂ ಐಸಿಎಆರ್-ಸಿಪಿಸಿಆರ್ ಐ ಕಾಸರಗೋಡು, ಡಿಎಎಸ್‍ಡಿ ಕ್ಯಾಲಿಕಟ್, ಕ್ಯಾಂಪ್ಕೊ, ಮ್ಯಾಮ್ಕೋಸ್, ತುಮ್ಕೋಸ್, ಅಡಿಕೆ ಪತ್ರಿಕೆ, ಅಮೃತ್ ನೋನಿ, ಕ್ರಾಸ್ಮ್, ಕ.ರಾ.ತೋ.ಇ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನವುಲೆಯ ಕೃಷಿ ಕಾಲೇಜಿನಲ್ಲಿ  ‘ಅಡಿಕೆ ಮೌಲ್ಯವರ್ಧಿತ ಉತ್ಪನ್ನ’ ಗಳ ಕುರಿತಾದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಡಾ.ಸೆಲ್ವಮಣಿ ಆರ್ , ಅಡಿಕೆಯ ಮೌಲ್ಯವರ್ಧನೆ ಮಾಡಿ ಉತ್ತಮ ಆದಾಯ ಗಳಿಸಲು ಸಾಕಷ್ಟು ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದರು. ಇಂದು ಅಡಿಕೆ ಸಿಪ್ಪೆ ಕೂಡ ತ್ಯಾಜ್ಯವಲ್ಲ.  ರೈತರು ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ರೈತರಿಗೆ ಉತ್ತಮ ಬೆಲೆ ಸಿಗಬೇಕು ಅದಕ್ಕಾಗಿ ಪ್ರಯತ್ನ ನಡೆಯಲಿ ಎಂದರು.

ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ.ರವಿ ಭಟ್ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಇಂದು ಗಮನಹರಿಸಬೇಕಿದೆ. ಅಡಿಕೆ ಸೋಗೆ, ಹಾಳೆ, ಸಿಪ್ಪೆ ಇದ್ಯಾವದೂ ತ್ಯಾಜ್ಯಗಳಲ್ಲ. ಇವೆಲ್ಲವನ್ನು ಲಾಭದಾಯಕವಾಗಿ ಮೌಲ್ಯವರ್ಧನೆ ಮಾಡಬಹುದು.ಮೇಘಾಲಯದಲ್ಲಿ ಒಂದು ತಂಡ ಶೇ.60 ಅಡಿಕೆ ಸಿಪ್ಪೆ ಬಳಸಿ ಬಟ್ಟೆ ತಯಾರಿಸಿದೆ. ಅಡಿಕೆ ಸಿಪ್ಪೆ/ಸೋಗೆ ಬಳಸಿ ಅಣಬೆ ಬೆಳೆಯಲಾಗುತ್ತಿದೆ ಎಂದರು.

ಕ್ಯಾಲಿಕಟ್‍ನ ಡಿಎಎಸ್‍ಡಿ ಉಪನಿರ್ದೇಶಕಿ ಡಾ.ಫೆಮಿನಾ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಜೊತೆಗೆ ಅಡಿಕೆಯ ಔಷಧೀಯ ಉಪಯೋಗಗಳು, ಮಾನವನ ಆರೋಗ್ಯದ ಮೇಲೆ ಅಡಿಕೆಯ ಪ್ರಭಾವ ಹಾಗೂ ಅಡಿಕೆಯ ವಿತರಣೆ ಮತ್ತು ಬಳಕೆ ಇವುಗಳ ಅಧ್ಯಯನ ನಡೆಸಬೇಕಾಗಿದೆ, ಈ ಪ್ರಯತ್ನ ನಡೆಯುತ್ತಿದೆ ಎಂದರು.

Advertisement

ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ನಾಗರಾಜಪ್ಪ ಅಡಿವಪ್ಪರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಕೆ.ನಾಗರಾಜ್, ಅಡಿಕೆ ಪತ್ರಿಕೆಯ ಸಂಪಾದಕ ಶ್ರೀ ಪಡ್ರೆ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ
July 21, 2025
7:11 AM
by: The Rural Mirror ಸುದ್ದಿಜಾಲ
ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ
July 21, 2025
6:58 AM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ
ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ
July 21, 2025
6:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group