ದೇಶದಲ್ಲಿ ಸುಮಾರು 67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.ಈಗಲೂ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಈಗ ಅಡಿಕೆ ಬಳಕೆಯ ಕಡೆಗೆ, ಅಡಿಕೆ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಬೇಕಿದೆ ಎಂದು ಅಭಿಪ್ರಾಯಪಡಲಾಗಿದೆ.
ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ ಶಿವಮೊಗ್ಗ ಹಾಗೂ ಐಸಿಎಆರ್-ಸಿಪಿಸಿಆರ್ ಐ ಕಾಸರಗೋಡು, ಡಿಎಎಸ್‍ಡಿ ಕ್ಯಾಲಿಕಟ್, ಕ್ಯಾಂಪ್ಕೊ, ಮ್ಯಾಮ್ಕೋಸ್, ತುಮ್ಕೋಸ್, ಅಡಿಕೆ ಪತ್ರಿಕೆ, ಅಮೃತ್ ನೋನಿ, ಕ್ರಾಸ್ಮ್, ಕ.ರಾ.ತೋ.ಇ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನವುಲೆಯ ಕೃಷಿ ಕಾಲೇಜಿನಲ್ಲಿ ‘ಅಡಿಕೆ ಮೌಲ್ಯವರ್ಧಿತ ಉತ್ಪನ್ನ’ ಗಳ ಕುರಿತಾದ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿದ ಡಾ.ಸೆಲ್ವಮಣಿ ಆರ್ , ಅಡಿಕೆಯ ಮೌಲ್ಯವರ್ಧನೆ ಮಾಡಿ ಉತ್ತಮ ಆದಾಯ ಗಳಿಸಲು ಸಾಕಷ್ಟು ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದರು. ಇಂದು ಅಡಿಕೆ ಸಿಪ್ಪೆ ಕೂಡ ತ್ಯಾಜ್ಯವಲ್ಲ. ರೈತರು ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ಬೆಳೆ ಬೆಳೆಯುತ್ತಿದ್ದಾರೆ. ಹೀಗಾಗಿ ರೈತರಿಗೆ ಉತ್ತಮ ಬೆಲೆ ಸಿಗಬೇಕು ಅದಕ್ಕಾಗಿ ಪ್ರಯತ್ನ ನಡೆಯಲಿ ಎಂದರು.
ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಡಾ.ರವಿ ಭಟ್ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಕಡೆಗೆ ಇಂದು ಗಮನಹರಿಸಬೇಕಿದೆ. ಅಡಿಕೆ ಸೋಗೆ, ಹಾಳೆ, ಸಿಪ್ಪೆ ಇದ್ಯಾವದೂ ತ್ಯಾಜ್ಯಗಳಲ್ಲ. ಇವೆಲ್ಲವನ್ನು ಲಾಭದಾಯಕವಾಗಿ ಮೌಲ್ಯವರ್ಧನೆ ಮಾಡಬಹುದು.ಮೇಘಾಲಯದಲ್ಲಿ ಒಂದು ತಂಡ ಶೇ.60 ಅಡಿಕೆ ಸಿಪ್ಪೆ ಬಳಸಿ ಬಟ್ಟೆ ತಯಾರಿಸಿದೆ. ಅಡಿಕೆ ಸಿಪ್ಪೆ/ಸೋಗೆ ಬಳಸಿ ಅಣಬೆ ಬೆಳೆಯಲಾಗುತ್ತಿದೆ ಎಂದರು.
ಕ್ಯಾಲಿಕಟ್‍ನ ಡಿಎಎಸ್‍ಡಿ ಉಪನಿರ್ದೇಶಕಿ ಡಾ.ಫೆಮಿನಾ ಮಾತನಾಡಿ, ಅಡಿಕೆಯ ಮೌಲ್ಯವರ್ಧನೆಯ ಜೊತೆಗೆ ಅಡಿಕೆಯ ಔಷಧೀಯ ಉಪಯೋಗಗಳು, ಮಾನವನ ಆರೋಗ್ಯದ ಮೇಲೆ ಅಡಿಕೆಯ ಪ್ರಭಾವ ಹಾಗೂ ಅಡಿಕೆಯ ವಿತರಣೆ ಮತ್ತು ಬಳಕೆ ಇವುಗಳ ಅಧ್ಯಯನ ನಡೆಸಬೇಕಾಗಿದೆ, ಈ ಪ್ರಯತ್ನ ನಡೆಯುತ್ತಿದೆ ಎಂದರು.
ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ನಾಗರಾಜಪ್ಪ ಅಡಿವಪ್ಪರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಕೆ.ನಾಗರಾಜ್, ಅಡಿಕೆ ಪತ್ರಿಕೆಯ ಸಂಪಾದಕ ಶ್ರೀ ಪಡ್ರೆ ಮೊದಲಾದವರು ಇದ್ದರು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…