Advertisement
The Rural Mirror ವಾರದ ವಿಶೇಷ

ಅಡಿಕೆ ಹಳದಿ ಎಲೆ ರೋಗ | ಹಬ್ಬಿದ ರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರ | ಪರಿಹಾರ ಏನು ? ಮುಂಜಾಗ್ರತೆ ಏನು ?

Share
ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿದೆ. ಕೆಲವೇ ಕಡೆ ಇದ್ದ ಅಡಿಕೆ ಹಳದಿ ಎಲೆ ರೋಗ ಈಗ ಅಲ್ಲಲ್ಲಿ ಕಂಡುಬರುತ್ತಿದೆ. ಶೃಂಗೇರಿ, ಕೊಪ್ಪ, ಕೇರಳದ ಕೆಲವು ಕಡೆ ಹಾಗೂ ದಕ ಜಿಲ್ಲೆಯ ಸಂಪಾಜೆ, ಅರಂತೋಡು ಮಾತ್ರವಲ್ಲ ಈಗ ದ ಕ ಜಿಲ್ಲೆಯ ಹಲವು ತಾಲೂಕುಗಳಲ್ಲಿ  ಕಂಡುಬಂದಿದೆ. ಹೀಗಿರುವಾಗ ಪರಿಹಾರ ಕಾಣದ ಈ ರೋಗಕ್ಕೆ ಬೆಳೆಗಾರರು  ಕಂಗಾಲಾಗಿದ್ದಾರೆ. ಹಾಗಿದ್ದರೆ ಬೆಳೆಗಾರರು ಮಾಡಬೇಕಾದ ಎಚ್ಚರಿಕೆ ಏನು ? ಎಂಬ ಬಗ್ಗೆಯೂ ಮಾಹಿತಿ ಇಲ್ಲ.
ಅಡಿಕೆ ಹಳದಿ ಎಲೆ ರೋಗ ಬಾಧಿಸಿದ ತೋಟ

ಅಡಿಕೆ ತೋಟದಲ್ಲಿ ಹಳದಿ ಎಲೆ ರೋಗಕ್ಕೆ ಇಂದಿಗೂ ಶಾಶ್ವತವಾದ ಪರಿಹಾರ ಸಾಧ್ಯವಾಗಿಲ್ಲ. ದೀರ್ಘಾವಧಿಯ ಅಧ್ಯಯನ ಹಾಗೂ ಸಂಶೋಧನೆ ಬಳಿಕ ಈ ರೋಗಕ್ಕೆ ಕಾರಣ ಫೈಟೋಪ್ಲಾಸ್ಮಾ ಎಂದು ಗುರುತಿಸಲಾಗಿತ್ತು. ಹಾಗಿದ್ದರೂ ಸಂಪೂರ್ಣವಾಗಿ ಅಧಿಕೃತವಾಗಿ ಇಂದಿಗೂ ಹೇಳಲಾಗುತ್ತಿಲ್ಲ. ಮೇಲ್ನೋಟಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಹೇಳಲಾಗುತ್ತದೆ. ಆದರೆ ಈ ರೋಗ ಪ್ರಸರಣದ ವಾಹನ ಯಾವುದು  ಎಂಬ ಬಗ್ಗೆಯೂ ಖಚಿತವಾದ ಅಧ್ಯಯನ ನಡೆದರೂ ಅಧಿಕೃತ ವರದಿ ಇಲ್ಲ.ಮಣ್ಣು, ನೀರು, ಗಾಳಿ ಕಾರಣವೇ ಎಂಬುದೂ ಅಧಿಕೃತವಾಗಿಲ್ಲ.ಈ ನಡುವೆಯೇ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿದೆ. ಹೀಗಿರುವಾಗ ಅಡಿಕೆ ಬೆಳೆಗಾರರು ತಕ್ಷಣಕ್ಕೆ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಏನು ಮಾಡಬೇಕು ಎಂಬುದೂ ಮಾಹಿತಿ ಇಲ್ಲ.

ಅಡಿಕೆ ಹಳದಿ ಎಲೆ ರೋಗ ಬಾಧಿಸಿದ ಅಡಿಕೆ ಮರ

ಕೇರಳದಲ್ಲಿ ಕಾಣಿಸಿಕೊಂಡ ಅಡಿಕೆ ಹಳದಿ ಎಲೆ ರೋಗ ಕೇರಳದ ವಯನಾಡು ಪ್ರದೇಶ ದಾಟಿ ಕರ್ನಾಟಕದ ಸುಳ್ಯ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಹಲವು ಕಡೆಗಳಲ್ಲಿ  ಹಲವು ವರ್ಷಗಳಿಂದ ಕಂಡುಬಂದಿತ್ತು. ಇದೀಗ ಸುಳ್ಯದ ಸಂಪಾಜೆ, ಅರಂತೋಡು ಕಡೆಗಳಲ್ಲಿ  ವ್ಯಾಪಕವಾಗಿದೆ, ಮರ್ಕಂಜ ಪ್ರದೇಶದಲ್ಲೂ ಕಂಡುಬಂದು ವ್ಯಾಪಿಸುತ್ತಿದೆ. ಗುತ್ತಿಗಾರು, ಕಡಬ, ಕಾಣಿಯೂರು, ಸವಣೂರು ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಶೃಂಗೇರಿ, ಕೊಪ್ಪ ಪ್ರದೇಶದಲ್ಲೂ ಹೆಚ್ಚಾಗಿ ಕಂಡುಬಂದಿದೆ.ಶೃಂಗೇರಿಯ ಮುಂದಿನ ಪ್ರದೇಶದಲ್ಲಿ  ಕಣ್ಣು ಹಾಯಿಸಿದಷ್ಟು ದೂರಕ್ಕೆ ಅಡಿಕೆ ಮರ ಹಳದಿ ಬಣ್ಣಕ್ಕೆ ತಿರುಗಿ,  ಬೋಳಾಗಿ ಒಣಗಿ ನಿಂತ ಅಡಿಕೆ ತೋಟಗಳು ಕಾಣಿಸಸುತ್ತವೆ, ಹಸಿರು ತೋಟಗಳೇ ಇಲ್ಲ ಎಂಬಷ್ಟು ರೋಗಪೀಡಿತ ತೋಟಗಳು ಕಂಡುಬಂದಿದೆ.

ಸುಳ್ಯ ತಾಲೂಕಿನ ಗುತ್ತಿಗಾರಿನ ಚಣಿಲ ಪ್ರದೇಶದಲ್ಲಿ ಅಡಿಕೆಗೆ ಹಳದಿ ಎಲೆ ರೋಗ ಕಂಡುಬಂದಿದೆ. ಕಳೆದ ಎರಡು ವರ್ಷಗಳಲ್ಲಿ  ಈ ಬಗ್ಗೆ ಮಾಹಿತಿ ತಿಳಿದಿದೆ. ಇದೀಗ ನಿಧಾನಕ್ಕೆ ವಿಸ್ತರಣೆಯೂ ಆಗಿದೆ. ಎರಡು ವರ್ಷಗಳಿಂದ ಚಣಿಲ ಪ್ರದೇಶದ ಹಲವು ತೋಟಗಳಲ್ಲಿ ಹಳದಿ ಎಲೆ ರೋಗ ಕಾಣಿಸಿಕೊಂಡಿದೆ. ಇದೀಗ ಅಡಿಕೆ ಗುಣಮಟ್ಟದಲ್ಲೂ ವ್ಯತ್ಯಾಸ ಕಾಣುತ್ತಿದೆ ಎನ್ನುತ್ತಾರೆ ಕೃಷಿಕ ತಿರುಮಲೇಶ್ವರ ಭಟ್‌ ಚಣಿಲ.

ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ,ಮರ್ಕಂಜದಿಂದ ತೊಡಗಿ ವಿಟ್ಲ ಬಳಿಯ ಬದನಾಜೆ, ಕೊಡಿಪ್ಪಾಡಿ, ಪೋಳ್ಯ, ಕೆದಿಲ, ಕೊಡಿಯಾಲ, ಕಾಣಿಯೂರು, ಪಂಜ, ಕುಕ್ಕುಜಡ್ಕ, ಹೀಗೆ ಹಲವು ಕಡೆಗಳಲ್ಲಿ ವಿಸ್ತರಿಸಿದೆ. ಹೀಗಾಗಿ ಅಡಿಕೆ ಬೆಳೆಗಾರರಿಗೆ ಆತಂಕವಾಗಿದೆ.

ಸದ್ಯಕ್ಕೆ ಈ ರೋಗವು ಮಣ್ಣು ಅಥವಾ ನೀರಿನ ಮೂಲಕ ಪಸರಿಸುವ ಸಾಧ್ಯತೆ ಹೆಚ್ಚು ಎಂಬುದು  ಒಂದು ಅಧ್ಯಯನ ವರದಿ. ಹೀಗಾಗಿ ಹಳದಿ ಎಲೆ ರೋಗ ಪೀಡಿತ ಪ್ರದೇಶದಿಂದ ಮಣ್ಣು ಸಹಿತವಾದ ಗಿಡಗಳನ್ನು ತಂದು ನೆಡುವುದು  ತಪ್ಪಿಸಬೇಕು. ಅಡಿಕೆ ಹಳದಿ ಪೀಡಿತ ಪ್ರದೇಶದ ಆಸುಪಾಸಿನ ಕಡೆಯ ಅಡಿಕೆ ಗಿಡಗಳನ್ನೂ ತಂದು ನೆಡುವುದು  ಕಡಿಮೆ ಮಾಡಬೇಕಿದೆ. ನರ್ಸರಿ ಮೊದಲಾದ ಕಡೆಗಳಿಂದ ಗಿಡಗಳನ್ನು ತರುವ ಮೊದಲು ಸರಿಯಾದ ಪೂರ್ವ ಮಾಹಿತಿ ಬೆಳೆಗಾರರು ತಿಳಿಯಬೇಕಿದೆ. ಒಂದು ವೇಳೆ ಹಳದಿ ಎಲೆ ರೋಗ ಪೀಡಿತ ಪ್ರದೇಶದ ಆಸುಪಾಸಿನ ಮರಗಳಿಂದ ಅಡಿಕೆ ಬೀಜ ತಂದು ಗಿಡ ಮಾಡಿದ್ದರೆ ಅಂತಹ ಗಿಡಗಳನ್ನು ಆದಷ್ಟು ನಾಟಿ ಮಾಡುವುದು  ಕಡಿಮೆ ಮಾಡಬೇಕಿದೆ. ಭೂಮಿಯಲ್ಲಿ ಸೂಕ್ಷ್ಮ ಪೋಷಕಾಂಶಗಳ ನಿರ್ವಹಣೆ ಬೆಳೆಗಾರರು ಸರಿಯಾಗಿ ಮಾಡಬೇಕಾಗಿದ್ದು , ಕೆಲವೊಮ್ಮೆ ಇಂತಹ ಪೋಷಕಾಂಶಗಳ ಕೊರತೆಯಿಂದಲೇ ಅಡಿಕೆ ಮರಗಳು ಹಳದಿಯಾಗುತ್ತವೆ. ಇದನ್ನೇ ಹಳದಿ ಎಲೆ ರೋಗ ಎಂದು ತಪ್ಪಾಗಿ ಮಾಹಿತಿ ತಿಳಿಯಬೇಕಾಗುತ್ತದೆ. ಏಕೆಂದರೆ ಹಳದಿ ಎಲೆ ರೋಗ ಪತ್ತೆ ಮಾಡುವ ಯಾವುದೇ ಪ್ರಯೋಗಾಲಯಗಳೂ ಇಲ್ಲಿ ಇಲ್ಲದೇ ಇರುವುದರಿಂದ ಹಳದಿ ಎಲೆ ರೋಗ ಪತ್ತೆ ಮಾಡುವುದೂ ಸುಲಭವಲ್ಲ. ಹೀಗಾಗಿ ಸೂಕ್ಷ್ಮ ಪೋಷಕಾಂಶಗಳನ್ನೂ ಬೆಳೆಗಾರರು ಕಾಲಕಾಲಕ್ಕೆ ನೀಡುವುದು  ಉತ್ತಮ. ಇಂತಹ ಕೆಲವು ಸರಳವಾದ ಯೋಜನೆಯನ್ನು  ಹಾಕಿಕೊಳ್ಳುವ ಮೂಲಕ ಹಳದಿ ಎಲೆ ರೋಗವನ್ನು ಬಂದರೂ ಎದುರಿಸಬಹುದಾಗಿದೆ.

ಅಡಿಕೆ ಹಳದಿ ಎಲೆ ರೋಗ ಬಾಧಿಸಿದ ಅಡಿಕೆ ಮರ

ಅಡಿಕೆ ಕೃಷಿಯ ಭವಿಷ್ಯದ ಮೇಲೆ ಕರಿನೆರಳು ಬಿದ್ದಿರುವುದು  ಸತ್ತ. ಧಾರಣೆ ಏರಿಕೆಯ ಖುಷಿ ಸದ್ಯಕ್ಕಿದ್ದರೂ, ಅಡಿಕೆ ಹಳದಿ ಎಲೆ ರೋಗಕ್ಕೆ ಸೂಕ್ತವಾದ ಪರಿಹಾರ ಸಿಗದೇ ಇದ್ದರೆ ಭವಿಷ್ಯದಲ್ಲಿ ದ ಕ ಜಿಲ್ಲೆಯಲ್ಲಿ  ಅಡಿಕೆ ಬೆಳೆಯೇ ಮಾರಕವಾಗಿ ಮಲೆನಾಡಿನ ಸಾಂಪ್ರದಾಯಿಕ ಕೃಷಿಯಾದ ಅಡಿಕೆಯ ಮೇಲೆ ಹಾನಿ ಇರುವುದು  ನಿಶ್ಚಿತವಾಗಿದೆ.  ಅಡಿಕೆ ವಹಿವಾಟು ಇಡೀ ಕರಾವಳಿ ಮೇಲೆ ಪರಿಣಾಮ ಬೀರುವುದರಿಂದ ಇಲ್ಲಿನ ಆರ್ಥಿಕ ವಹಿವಾಟಿನ ಮೇಲೂ ಪರಿಣಾಮವಾಗಬಹುದು. ಹೀಗಾಗಿ ಈಗಲೇ ಸೂಕ್ತ ಎಚ್ಚರಿಕೆ ಅಗತ್ಯವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

9 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago