ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ಇತರ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ರಚಿಸಲಾಗಿದೆ.
The @AgriGoI has constituted a committee to carry out a scientific study to analyse & address the issue of YLD in arecanut confronted by farmers in Karnataka & other states.
— Shobha Karandlaje (@ShobhaBJP) October 19, 2022
Committee was instituted under the supervision of Union Minister Sri @nstomar Ji. https://t.co/6g3yrkiG9p pic.twitter.com/t2oiNMSDlP
ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.