ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.
ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್‌ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…