ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

June 9, 2026
10:55 PM
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ವಿಶೇಷ ಪ್ಯಾಕೇಜ್ ಮತ್ತು MIDH ಮಿತಿ ವಿನಾಯಿತಿ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದ್ದಾರೆ.

ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಗಾರರನ್ನು ಕಂಗೆಡಿಸಿರುವ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕಿ ರೋಗ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಬೃಜೇಶ್‌ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಹಳದಿ ಎಲೆ ರೋಗವು ವ್ಯಾಪಕವಾಗಿ ಹರಡಿದ್ದು, ಸುಮಾರು 16,000 ಹೆಕ್ಟೇರ್ ಪ್ರದೇಶವನ್ನು ಬಾಧಿಸಿದೆ. ಇದರಿಂದ ಲಕ್ಷಾಂತರ ರೈತರ ಆರ್ಥಿಕ ಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಂಸದರು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

Advertisement

ರೋಗಕ್ಕೆ ಕಾರಣವಾಗಿರುವ ಫೈಟೋಪ್ಲಾಸ್ಮಾ ಸೋಂಕಿನ ನಿರ್ಮೂಲನೆಗೆ ಪರಿಣಾಮಕಾರಿ ಪರಿಹಾರ ಇನ್ನೂ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ICAR-‌CPCRI  ಅಭಿವೃದ್ಧಿಪಡಿಸಿರುವ ನಿರ್ವಹಣಾ ಕ್ರಮಗಳೇ ರೈತರಿಗೆ ಪ್ರಮುಖ ಆಶಾಕಿರಣವಾಗಿವೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಿಟ್ಲದಲ್ಲಿ ಅತ್ಯಾಧುನಿಕ ರೋಗನಿರ್ಣಯ ಪ್ರಯೋಗಾಲಯ ಸ್ಥಾಪನೆ, ಹಳದಿ ಎಲೆ ರೋಗವನ್ನು ತಡೆದುಕೊಳ್ಳುವ ಸಾಮರ್ಥ್ಯವಿರುವ ಗಿಡಗಳ ಅಂಗಾಂಶ ಕೃಷಿ ತಂತ್ರಜ್ಞಾನದ ಮೂಲಕ ಯಶಸ್ವಿ ಮರುಸೃಷ್ಟಿ ಸೇರಿದಂತೆ ಸಿಪಿಸಿಆರ್‌ಐ ಕೈಗೊಂಡಿರುವ ಸಂಶೋಧನಾ ಕಾರ್ಯಗಳನ್ನು ಸಂಸದರು ಶ್ಲಾಘಿಸಿದ್ದಾರೆ. ಆದರೆ, ಈ ತಂತ್ರಜ್ಞಾನಗಳು ರೈತರಿಗೆ ತಲುಪಲು ಹಾಗೂ ದೊಡ್ಡ ಪ್ರಮಾಣದಲ್ಲಿ ಅಳವಡಿಕೆಯಾಗಲು ಕೇಂದ್ರ ಸರ್ಕಾರದಿಂದ ವಿಶೇಷ ಆರ್ಥಿಕ ನೆರವು ಮತ್ತು ಸಮಗ್ರ ಬೆಂಬಲ ಪ್ಯಾಕೇಜ್ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

Advertisement

ಎಲೆ ಚುಕ್ಕಿ ರೋಗಕ್ಕೆ MIDH ನಿಯಮವೇ ಅಡ್ಡಿ: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವೇಗವಾಗಿ ಹರಡುತ್ತಿರುವ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2023ರಲ್ಲಿ ಕೇಂದ್ರ ಸರ್ಕಾರವು ಸಿಪಿಸಿಆರ್‌ಐ ತಜ್ಞರ ವರದಿ ಆಧರಿಸಿ ವೈಜ್ಞಾನಿಕ ನಿರ್ವಹಣಾ ಮಾರ್ಗಸೂಚಿಗಳನ್ನು ರೂಪಿಸಿತ್ತು.

ಅದೇ ವೇಳೆ ₹225 ಕೋಟಿ ಅನುದಾನವನ್ನು 60:40ರ ಧನಸಹಾಯ ಮಾದರಿಯಲ್ಲಿ ಮಂಜೂರು ಮಾಡಲಾಗಿತ್ತು. ಆದರೆ ಈ ಅನುದಾನವನ್ನು Mission for Integrated Development of Horticulture (MIDH) ಯೋಜನೆಗೆ ಲಿಂಕ್ ಮಾಡಿದ್ದರಿಂದ ಸಮಸ್ಯೆ ಉಂಟಾಯಿತು.

Advertisement

MIDH ನಿಯಮಾವಳಿಗಳ ಪ್ರಕಾರ ಸಸ್ಯ ಸಂರಕ್ಷಣೆಗೆ ಪ್ರತಿ ಹೆಕ್ಟೇರ್‌ಗೆ ಗರಿಷ್ಠ ₹1,500 ವೆಚ್ಚಕ್ಕೆ ಮಾತ್ರ ಅವಕಾಶವಿತ್ತು. ಆದರೆ ಸಿಪಿಸಿಆರ್‌ಐ ಲೆಕ್ಕಾಚಾರದಂತೆ ವಿಶೇಷ ಶಿಲೀಂಧ್ರನಾಶಕಗಳು ಹಾಗೂ ಪೋಷಕಾಂಶ ನಿರ್ವಹಣೆಯ ವೆಚ್ಚ ಇದಕ್ಕಿಂತ ಬಹಳ ಹೆಚ್ಚಾಗಿತ್ತು. ಪರಿಣಾಮವಾಗಿ ಮಂಜೂರಾದ ಅನುದಾನವನ್ನು ಬಳಸಲು ಸಾಧ್ಯವಾಗದೆ ಸರ್ಕಾರಕ್ಕೆ ವಾಪಸ್ ಹೋಗಿತ್ತು.

ಈ ಹಿನ್ನೆಲೆಯಲ್ಲಿ ಎಲೆ ಚುಕ್ಕಿ ರೋಗಕ್ಕೆ ಮಾತ್ರ ಅನ್ವಯವಾಗುವಂತೆ MIDH ವೆಚ್ಚ ಮಿತಿಯಿಂದ ವಿಶೇಷ ವಿನಾಯಿತಿ ನೀಡಿ, ಈ ಹಿಂದೆ ಮಂಜೂರಾಗಿದ್ದ ಅನುದಾನವನ್ನು ಮರುಬಿಡುಗಡೆ ಮಾಡಬೇಕು ಎಂದು ಸಂಸದರು ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement

ಮಂಗಳೂರಿಗೆ ಭೇಟಿ ನೀಡುವಂತೆ ಆಹ್ವಾನ :  ಕರಾವಳಿ ಕರ್ನಾಟಕದ ಆರ್ಥಿಕತೆಯಲ್ಲಿ ಅಡಿಕೆ ಕೃಷಿಯ ಮಹತ್ವವನ್ನು ಪರಿಗಣಿಸಿ, ಇಲ್ಲಿನ ವಾಸ್ತವ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶೀಘ್ರದಲ್ಲೇ ಮಂಗಳೂರಿಗೆ ಭೇಟಿ ನೀಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಸಚಿವಾಲಯ, ಐಸಿಎಆರ್, ಸಿಪಿಸಿಆರ್‌ಐ ಹಾಗೂ ರಾಜ್ಯ ಸರ್ಕಾರದ ವಿವಿಧ ಸಂಸ್ಥೆಗಳ ಸಮನ್ವಯದೊಂದಿಗೆ ವಿಜ್ಞಾನಿಗಳು ಮತ್ತು ರೈತರೊಂದಿಗೆ ನೇರ ಸಂವಾದ ನಡೆಸಿದರೆ ಸಮಸ್ಯೆಯ ವಾಸ್ತವ ಚಿತ್ರಣ ದೊರೆಯಲಿದ್ದು, ಅಡಿಕೆ ವಲಯ ರಕ್ಷಣೆಗೆ ರಾಷ್ಟ್ರೀಯ ಮಟ್ಟದ ಸಮಗ್ರ ಯೋಜನೆ ರೂಪಿಸಲು ನೆರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Dakshina Kannada MP Brijesh Chowta has urged Union Agriculture Minister Shivraj Singh Chouhan to take immediate action against Yellow Leaf Disease and Leaf Spot Disease affecting arecanut plantations in Karnataka’s coastal and Malnad regions. He has sought a special relief package, exemption from MIDH funding limits, re-release of the earlier sanctioned ₹225 crore assistance, and stronger support for CPCRI-recommended disease management measures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror