ಅಡಿಕೆ ಎಲೆಚುಕ್ಕಿ ರೋಗ ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ನ.5 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಲಿದ್ದಾರೆ. ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ಉಪನೀರ್ದೇಶಕ ಎಚ್ ಆರ್ ನಾಯಕ್, ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಭಾಗವಹಿಸುವರು.
ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…