ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ ಬಹುತೇಕ ತೋಟಗಳಲ್ಲಿ ಇಳುವರಿ ಕುಸಿತ ಕಂಡುಬಂದಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ ರೈತರ ಬಹುಪಾಲು ಈ ವರ್ಷ ಗಣನೀಯ ಪ್ರಮಾಣದ ಬೆಳೆ ನಷ್ಟವನ್ನು ಅನುಭವಿಸುತ್ತಿರುವುದಾಗಿ ತಿಳಿಸಿದ್ದಾರೆ.