ಕರಾವಳಿಯಲ್ಲಿ ಅಡಿಕೆ ಕೃಷಿಗೆ ಸಂಕಟ | ಸರ್ಕಾರ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ

January 28, 2026
7:10 AM

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಈ ಬಾರಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನ ವೈಪರೀತ್ಯ ಹಾಗೂ ಎಲೆಚುಕ್ಕಿ (ರೋಗ) ಹಾನಿಯಿಂದ ಇಳುವರಿ ಗಣನೀಯವಾಗಿ ಕುಸಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ತುರ್ತು ನೆರವು ನೀಡುವಂತೆ ಆಗ್ರಹಿಸಿದ್ದಾರೆ.  ಜಿಲ್ಲೆಯ ಪ್ರಮುಖ ಅಡಿಕೆ ಬೆಳೆಯ ಪ್ರದೇಶಗಳಲ್ಲಿ ಬೆಳೆ ಹಾನಿ ಪ್ರಮಾಣ ಹೆಚ್ಚಿದ್ದು, ಸುಮಾರು 11,803 ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ರೋಗದಿಂದ ತೀವ್ರವಾಗಿ ನಲುಗಿವೆ. ಪರಿಣಾಮವಾಗಿ ರೈತರಿಗೆ ಸುಮಾರು ಶೇ.60ರಷ್ಟು ಇಳುವರಿ ಕುಸಿತ ಉಂಟಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.

Advertisement
Advertisement

ಆರ್ಥಿಕ ಸಂಕಷ್ಟಕ್ಕೆ ತಳ್ಳಿದ ಬೆಳೆ ನಷ್ಟ : ಅಡಿಕೆ ಮೇಲೆ ಅವಲಂಬಿತ ಅನೇಕ ಕುಟುಂಬಗಳಿಗೆ ಈ ಬೆಳೆ ನಷ್ಟ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ರೋಗ ನಿಯಂತ್ರಣಕ್ಕೆ ರೈತರು ಹಲವು ಬಾರಿ ಔಷಧಿ ಸಿಂಪಡಿಸಿದ್ದರೂ ನಿರಂತರ ಹವಾಮಾನ ಬದಲಾವಣೆಗಳಿಂದ ಪ್ರಯೋಜನ ಕಡಿಮೆಯಾಗಿದೆ.  ಈ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಸಮೀಕ್ಷೆ ನಡೆಸಿ ಬೆಳೆ ನಷ್ಟದ ಪರಿಹಾರ ಘೋಷಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ವಿಮಾ ಪರಿಹಾರ ಕಳೆದುಕೊಳ್ಳುತ್ತಿರುವ ರೈತರು :  ಮಳೆ ಮಾಪನ ಕೇಂದ್ರಗಳ ದುಸ್ಥಿತಿಯಿಂದ ಜಿಲ್ಲೆಯ ರೈತರು ಪ್ರತಿ ವರ್ಷ ₹70–80 ಕೋಟಿ ಮೊತ್ತದ ಬೆಳೆವಿಮೆ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸಮೀಕ್ಷೆ–ಪರಿಹಾರ ಘೋಷಣೆಗೆ ಒತ್ತಾಯ : ರೈತರ ಪ್ರಕಾರ, ಹಾನಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ಅಂದಾಜಿಸಿ ತಕ್ಷಣ ಪರಿಹಾರ ಬಿಡುಗಡೆ ಮಾಡುವುದು ಅನಿವಾರ್ಯ. ಇಲ್ಲದಿದ್ದರೆ ಅಡಿಕೆ ಕೃಷಿ ಆಧಾರಿತ ಗ್ರಾಮೀಣ ಆರ್ಥಿಕತೆ ತೀವ್ರ ಹೊಡೆತ ಅನುಭವಿಸಲಿದೆ.  ಇದೇ ರೀತಿಯ ಸಮಸ್ಯೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಕಂಡುಬರುತ್ತಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸಂಘಟನೆಗಳು ಒತ್ತಾಯಿಸಿವೆ.

ಮೂಲ ವರದಿ: ಪ್ರಜಾವಾಣಿ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror