ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಈ ಬಾರಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನ ವೈಪರೀತ್ಯ ಹಾಗೂ ಎಲೆಚುಕ್ಕಿ (ರೋಗ) ಹಾನಿಯಿಂದ ಇಳುವರಿ ಗಣನೀಯವಾಗಿ ಕುಸಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ತುರ್ತು ನೆರವು ನೀಡುವಂತೆ ಆಗ್ರಹಿಸಿದ್ದಾರೆ. ಜಿಲ್ಲೆಯ ಪ್ರಮುಖ ಅಡಿಕೆ ಬೆಳೆಯ ಪ್ರದೇಶಗಳಲ್ಲಿ ಬೆಳೆ ಹಾನಿ ಪ್ರಮಾಣ ಹೆಚ್ಚಿದ್ದು, ಸುಮಾರು 11,803 ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ರೋಗದಿಂದ ತೀವ್ರವಾಗಿ ನಲುಗಿವೆ. ಪರಿಣಾಮವಾಗಿ ರೈತರಿಗೆ ಸುಮಾರು ಶೇ.60ರಷ್ಟು ಇಳುವರಿ ಕುಸಿತ ಉಂಟಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.
ಆರ್ಥಿಕ ಸಂಕಷ್ಟಕ್ಕೆ ತಳ್ಳಿದ ಬೆಳೆ ನಷ್ಟ : ಅಡಿಕೆ ಮೇಲೆ ಅವಲಂಬಿತ ಅನೇಕ ಕುಟುಂಬಗಳಿಗೆ ಈ ಬೆಳೆ ನಷ್ಟ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ರೋಗ ನಿಯಂತ್ರಣಕ್ಕೆ ರೈತರು ಹಲವು ಬಾರಿ ಔಷಧಿ ಸಿಂಪಡಿಸಿದ್ದರೂ ನಿರಂತರ ಹವಾಮಾನ ಬದಲಾವಣೆಗಳಿಂದ ಪ್ರಯೋಜನ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಸಮೀಕ್ಷೆ ನಡೆಸಿ ಬೆಳೆ ನಷ್ಟದ ಪರಿಹಾರ ಘೋಷಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.
ವಿಮಾ ಪರಿಹಾರ ಕಳೆದುಕೊಳ್ಳುತ್ತಿರುವ ರೈತರು : ಮಳೆ ಮಾಪನ ಕೇಂದ್ರಗಳ ದುಸ್ಥಿತಿಯಿಂದ ಜಿಲ್ಲೆಯ ರೈತರು ಪ್ರತಿ ವರ್ಷ ₹70–80 ಕೋಟಿ ಮೊತ್ತದ ಬೆಳೆವಿಮೆ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಸಮೀಕ್ಷೆ–ಪರಿಹಾರ ಘೋಷಣೆಗೆ ಒತ್ತಾಯ : ರೈತರ ಪ್ರಕಾರ, ಹಾನಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ಅಂದಾಜಿಸಿ ತಕ್ಷಣ ಪರಿಹಾರ ಬಿಡುಗಡೆ ಮಾಡುವುದು ಅನಿವಾರ್ಯ. ಇಲ್ಲದಿದ್ದರೆ ಅಡಿಕೆ ಕೃಷಿ ಆಧಾರಿತ ಗ್ರಾಮೀಣ ಆರ್ಥಿಕತೆ ತೀವ್ರ ಹೊಡೆತ ಅನುಭವಿಸಲಿದೆ. ಇದೇ ರೀತಿಯ ಸಮಸ್ಯೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಕಂಡುಬರುತ್ತಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸಂಘಟನೆಗಳು ಒತ್ತಾಯಿಸಿವೆ.
ಮೂಲ ವರದಿ: ಪ್ರಜಾವಾಣಿ
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…