ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.
ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…