ಅಡಿಕೆಗೆ ಬಾಧಿಸುತ್ತಿರುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ಕೇಂದ್ರ ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯ ತಂಡವು ಶೃಂಗೇರಿ, ಕಳಸ, ಸಂಸೆ, ತೀರ್ಥಹಳ್ಳಿಯ ವಿವಿಧ ತೋಟಗಳಿಗೆ ತೆರಳಿ ಹಳದಿ ಎಲೆರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಮಾಹಿತಿ ಪಡೆಯಿತು. ಇದೇ ವೇಳೆ ತೀರ್ಥಹಳ್ಳಿಯಲ್ಲಿ ಅಡಿಕೆ ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷ, ಸಚಿವ ಅರಗ ಜ್ಞಾನೇಂದ್ರ ಅವರು ತಂಡದ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು.
ಕೇಂದ್ರ ಮಟ್ಟದ ಈ ಸಮಿತಿಯು ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗ ಕುರಿತು ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದು, ಎರಡೂ ಬಾಧಿಸಿರುವ ತೋಟಗಳಲ್ಲಿ ರೋಗ ಗುರುತಿಸಿವುದು ಕೃಷಿಕರಿಗೆ ಕಷ್ಟವಾಗುತ್ತಿದೆ. ಸದ್ಯ ಪರಿಹಾರದ ಮಾಹಿತಿ ನೀಡಿಲ್ಲ, ಆದರೆ ಇದುವರೆಗೂ ನೀಡಲಾಗುತ್ತಿದ್ದ ಸಲಹೆಯನ್ನು ಕೃಷಿಕರಿಗೆ ಈ ತಂಡವು ನೀಡಿದೆ.
ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ , ಸಾವಯವ ಮಿಶನ್‌ನ ಆ ಶ್ರೀ ಆನಂದ, ಸಿ. ಪಿ.ಸಿ ಆರ್.ಐ., ಕಾಸರಗೋಡಿನ ಪ್ರಭಾರ ನಿರ್ದೇಶಕ ಡಾ. ಮುರಳೀಧರನ್, ಕಲ್ಲಿಕೋಟೆಯ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯನ್, ಸಿ.ಪಿ.ಸಿ.ಆರ್.ಐ. ಕಾಸರಗೋಡಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗ್ಡೆ ಮೊದಲಾದವರು ಇದ್ದರು.
This slideshow requires JavaScript.