Advertisement
MIRROR FOCUS

ಅಡಿಕೆ ಎಲೆಚುಕ್ಕಿ ರೋಗ | ಶೃಂಗೇರಿ , ತೀರ್ಥಹಳ್ಳಿಗೆ ಭೇಟಿ ನೀಡಿದ ಕೇಂದ್ರ ವೈಜ್ಞಾನಿಕ ತಂಡ | ಸಚಿವರ ಜೊತೆ ಸಭೆ |

Share

ಅಡಿಕೆಗೆ ಬಾಧಿಸುತ್ತಿರುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ಕೇಂದ್ರ ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯ ತಂಡವು ಶೃಂಗೇರಿ, ಕಳಸ, ಸಂಸೆ, ತೀರ್ಥಹಳ್ಳಿಯ ವಿವಿಧ ತೋಟಗಳಿಗೆ ತೆರಳಿ ಹಳದಿ ಎಲೆರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಮಾಹಿತಿ ಪಡೆಯಿತು. ಇದೇ ವೇಳೆ ತೀರ್ಥಹಳ್ಳಿಯಲ್ಲಿ ಅಡಿಕೆ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ, ಸಚಿವ ಅರಗ ಜ್ಞಾನೇಂದ್ರ ಅವರು ತಂಡದ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು.

Advertisement
Advertisement

Advertisement

ಕೇಂದ್ರ ಮಟ್ಟದ ಈ ಸಮಿತಿಯು ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗ ಕುರಿತು ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದು, ಎರಡೂ ಬಾಧಿಸಿರುವ ತೋಟಗಳಲ್ಲಿ ರೋಗ ಗುರುತಿಸಿವುದು ಕೃಷಿಕರಿಗೆ ಕಷ್ಟವಾಗುತ್ತಿದೆ. ಸದ್ಯ ಪರಿಹಾರದ  ಮಾಹಿತಿ ನೀಡಿಲ್ಲ, ಆದರೆ ಇದುವರೆಗೂ ನೀಡಲಾಗುತ್ತಿದ್ದ ಸಲಹೆಯನ್ನು ಕೃಷಿಕರಿಗೆ ಈ ತಂಡವು ನೀಡಿದೆ.

Advertisement

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಡಿ.ಎನ್.ಜೀವರಾಜ್ , ಸಾವಯವ ಮಿಶನ್‌ನ ಆ ಶ್ರೀ ಆನಂದ, ಸಿ. ಪಿ.ಸಿ ಆರ್.ಐ., ಕಾಸರಗೋಡಿನ ಪ್ರಭಾರ ನಿರ್ದೇಶಕ ಡಾ. ಮುರಳೀಧರನ್, ಕಲ್ಲಿಕೋಟೆಯ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯನ್, ಸಿ.ಪಿ.ಸಿ.ಆರ್.ಐ. ಕಾಸರಗೋಡಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗ್ಡೆ ಮೊದಲಾದವರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

3 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

5 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

9 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

12 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

13 hours ago