Advertisement
MIRROR FOCUS

ಅಡಿಕೆ ರೋಗ ಅಧ್ಯಯನ ಸಮಿತಿ ಸುಳ್ಯ ಭೇಟಿ | ಮರ್ಕಂಜದಲ್ಲಿ ತೋಟಗಳಿಗೆ ಭೇಟಿ ನೀಡಿದ ತಂಡ | ಕೃಷಿಕರಿಂದ ಮಾಹಿತಿ ಸಂಗ್ರಹ |

Share

ಅಡಿಕೆಗೆ ಬಾಧಿಸುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಸದಸ್ಯರು  ಸುಳ್ಯ ತಾಲೂಕಿನ ಮರ್ಕಂಜ ಮತ್ತು ರೆಂಜಾಳದ  ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗ ಪೀಡಿತ ಅಡಿಕೆ ತೋಟಗಳಿಗೆ ಭಾನುವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

Advertisement
Advertisement

Advertisement

ಕೇಂದ್ರ ಮಟ್ಟದ ಸಮಿತಿಯು ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗ ಕುರಿತು ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ನಾಳೆ ಶೃಂಗೇರಿ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ನೀಡಲಿದೆ ಈ ತಂಡ.

ಭಾನುವಾರ ಮರ್ಕಂಜದ ಮಾಪಲತೋಟ , ಬಲ್ಕಾಡಿಮತ್ತು ದಾಸರ ಬೈಲು ಪ್ರದೇಶದ ಕೃಷಿಕರ ತೋಟಕ್ಕೆ ಭೇಟಿ ನೀಡಿದ ತಂಡವು ಅಡಿಕ ಸೋಗೆ, ಅಡಿಕೆ ಮರ ಹಾಗೂ ಅಡಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡಿದೆ.ಹಳದಿ ಎಲೆ ರೋಗ ಮತ್ತು‌ ಎಲೆ ಚುಕ್ಕಿ ರೋಗ ಎರಡೂ ಒಂದೇ ತೋಟದಲ್ಲಿ ಇದ್ದಾಗ ಅವುಗಳನ್ನು ಪ್ರತ್ಯೇಕಿಸಿ ಗುರುತಿಸಲು ಕಷ್ಟವಾಗುವುದರ ಬಗ್ಗೆ ಕೃಷಿಕರೂ ಮಾಹಿತಿ ನೀಡಿದರು.

Advertisement

ಈ ಸಂದರ್ಭ ಸಿ. ಪಿ.ಸಿ ಆರ್.ಐ., ಕಾಸರಗೋಡಿನ ಪ್ರಭಾರ ನಿರ್ದೇಶಕ ಡಾ. ಮುರಳೀಧರನ್, ಕಲ್ಲಿಕೋಟೆಯ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯನ್, ಸಿ.ಪಿ.ಸಿ.ಆರ್.ಐ. ಕಾಸರಗೋಡಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗ್ಡೆ, ತೋಟಗಾರಿಕೆ ಉಪ ನಿರ್ದೇಶಕ ಡಾ. ಎಚ್. ಆರ್. ನಾಯ್ಕ್  ತಂಡದಲ್ಲಿದ್ದರು. ಸುಳ್ಯ ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು, ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳು, ಮರ್ಕಂಜ ಸೊಸೈಟಿಯ ಮುಖ್ಯಸ್ಥರು ಮತ್ತು ಸ್ಥಳೀಯ ಕೃಷಿಕರು ಜೊತೆಗಿದ್ದರು.

Advertisement

 

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

8 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

9 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago