ಅಡಿಕೆ ಮಾರುಕಟ್ಟೆ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕಳೆದ ವಾರ ಇಡೀ ಏರಿಕೆಯ ಹಾದಿಯಲ್ಲಿಯೇ ಇದ್ದ ಮಾರುಕಟ್ಟೆ ಈ ವಾರ ಬಹುಪಾಲು ಸ್ಥಿರವಾಗಿಯೇ ಇರುವ ಲಕ್ಷಣಗಳು ಕಾಣಿಸಿವೆ. ಮಂಗಳವಾರ ಕ್ಯಾಂಪ್ಕೋ ತನ್ನ ಮಾರುಕಟ್ಟೆ ದರದಲ್ಲಿ ಏರಿಕೆ ಮಾಡಿಲ್ಲ ಹೊಸ ಅಡಿಕೆ 500 ರೂಪಾಯಿ ಹಾಗೂ ಹಳೆ ಅಡಿಕೆ 515 ರೂಪಾಯಿಗೆ ಖರೀದಿ ಮಾಡಿದೆ. ಖಾಸಗಿ ವ್ಯಾಪಾರಿಗಳು ಕೂಡಾ ಇದೇ ಧಾರಣೆಯಲ್ಲಿ ಇದ್ದಾರೆ. ಕೆಲವು ಕಡೆಗಳಲ್ಲಿ ಮಾತ್ರವೇ ಖಾಸಗಿ ವ್ಯಾಪಾರಿಗಳು ಹೊಸ ಅಡಿಕೆಗೆ 505-510 ರೂಪಾಯಿವರೆಗೂ ಖರೀದಿ ಮಾಡುತ್ತಿದ್ದಾರೆ. ಹಳೆ ಅಡಿಕೆಯ ಖರೀದಿಯಲ್ಲಿ ಯಾವುದೇ ಏರಿಕೆ ಮಾಡಿಲ್ಲ. ಅಡಿಕೆ ಬೆಳೆಗಾರರು ಈ ವಾರದಿಂದ ನಿತ್ಯವೂ ಅಡಿಕೆ ಮಾರುಕಟ್ಟೆಯನ್ನು ಗಮನಿಸಿಕೊಳ್ಳುವುದು ಉತ್ತಮ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…