ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ | ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯನ್ನು ಭೇಟಿ ಮಾಡಿದ ಕ್ಯಾಂಪ್ಕೊ ನಿಯೋಗ |

October 27, 2024
7:16 AM
ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿದೆ ಈ ಬಗ್ಗೆವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್ನೇಷನಲ್ ಏಜನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್(IARC) ಮತ್ತು ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ನ(WHO)ಲ್ಲಿ ಮಂಡಿಸಿ ಅಡಿಕೆಯ ಬಗೆಗಿನ ತಪ್ಪು ತಿಳುವಳಿಕೆಯನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಮನವಿ.

ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರ ನೇತೃತ್ವದ ನಿಯೋಗ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿ ಡಾ.ಸೌಮ್ಯ ಸ್ವಾಮಿನಾಥನ್ ಅವರನ್ನು ಚೆನೈಯಲ್ಲಿ  ಭೇಟಿ ಮಾಡಿದರು.ಅಡಿಕೆಯ ಉಪಯೋಗವು ಕ್ಯಾನ್ಸರ್ ಕಾರಕವಲ್ಲ ಬದಲಾಗಿ ಶಮನಕಾರಕ ಗುಣಗಳನ್ನು ಹೊಂದಿರುವುದನ್ನು ಸಾಬೀತುಪಡಿಸುವ ಸುಮಾರು 20 ಕ್ಕೂ ಹೆಚ್ಚು ಸಂಶೋಧನಾ ವರದಿಗಳನ್ನು ಪ್ರಸ್ತುತ ಪಡಿಸಿ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ವಿಜ್ಞಾನಿಯವರಿಗೆ ಮನವರಿಕೆ ಮಾಡಿದ್ದಾರೆ. …..ಮುಂದೆ ಓದಿ….

Advertisement
Advertisement
Advertisement

ಭೇಟಿಯ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯ ಉಪಯೋಗ ಕ್ಯಾನ್ಸರ್ ಕಾರಕವೆಂದು ಪರಿಗಣಿಸಿರುವುದು ಅಡಿಕೆಯನ್ನೇ ಜೀವನಾಧಾರವಾಗಿ ನಂಬಿರುವ ರೈತರ ಮೇಲೆ ಬೀರಿರುವ ಪರಿಣಾಮದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ನಿಯೋಗದಲ್ಲಿ ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಸತ್ಯನಾರಯಣ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೇಶವ ಭಟ್ ಭಾಗವಹಿಸಿದ್ದರು.

Advertisement

ರೈತರ ಸಮಸ್ಯೆಗಳ ಬಗ್ಗೆ ತಿಳುವಳಿಕೆ ಪಡೆದು, ಇಂತಹ ವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್ನೇಷನಲ್ ಏಜನ್ಸಿ ಫಾರ್ ಕ್ಯಾನ್ಸರ್ ರಿಸರ್ಚ್(IARC) ಮತ್ತು ವರ್ಲ್ಡ್ ಹೆಲ್ತ್ ಆರ್ಗನೈಸೇಷನ್ನ(WHO)ಲ್ಲಿ ಮಂಡಿಸಿ ಅಡಿಕೆಯ ಬಗೆಗಿನ ತಪ್ಪು ತಿಳುವಳಿಕೆಯನ್ನು ಮರು ಪರಿಶೀಲಿಸಲು ಭಾರತ ಸರಕಾರದ ಮೂಲಕ ಒತ್ತಡ ಹೇರುವಂತೆ ಸಲಹೆ ನೀಡಿದ್ದಾರೆ. ರೈತರ ಸಮಸ್ಯೆ ನಿವಾರಣೆಗೆ ಕ್ಯಾಂಪ್ಕೊದ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಈ ಕುರಿತು ಕೇಂದ್ರ ಕೃಷಿ ಹಾಗೂ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಚಿವಾಲಯಕ್ಕೆ ತಾನು ಅಭಿಪ್ರಾಯ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಕ್ಯಾಂಪ್ಕೋ ಪ್ರಕಟಣೆ ತಿಳಿಸಿದೆ.

A CAMPCO delegation, consisting of President Sri.Kishore Kumar Kodgi, Managing Director Dr.B.V.Sathyanarayana and ARDF Executive Officer Dr.KeshavBhat, met Dr.SoumyaSwaminathan, former Chief Scientist of the World Health Organization, at the M.S. Swaminathan Research Foundation in Chennai. The delegation engaged in indepth discussions, emphasizing that the WHO’s classification of Arecanut as carcinogenic has significantly impacted  the livelihoods of lakhs of Arecanut Farmers.

Advertisement

The CAMPCO delegation also presented more than 20 research studies indicating that Arecanut is not carcinogenic and has anti-cancer properties. Dr.SoumyaSwaminathan understood the Farmers problems and suggested to present such reliable  data to International Agency for Cancer Research (IARC) and World Health Organisation (WHO) through the Government of India for reviewing their observation on Carcinogenicity of Arecanut. She assured her support for the Farmers, including advocating for discussions with the Ministries of Agriculture and also Health and Family Welfare.

CAMPCO extends its sincere gratitude to Dr.SoumyaSwaminathan for her valuable guidance and commitment to the welfare of our Farmers.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror