Advertisement
MIRROR FOCUS

ಮತ್ತೆ ವಿವಿದೆಡೆ ಅಡಿಕೆ ಕಳ್ಳಸಾಗಾಣಿಕೆಗೆ ತಡೆ | 10 ಸಾವಿರ ಕೆಜಿಗಿಂತಲೂ ಅಧಿಕ ಬರ್ಮಾ ಅಡಿಕೆ ವಶ |

Share

ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಸುಮಾರು 10 ಸಾವಿರಕ್ಕೂ ಅಧಿಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement
Advertisement

ಕ್ಯಾಚಾರ್ ಜಿಲ್ಲೆಯ ಧೋಲೈನಲ್ಲಿ  ನಾಲ್ಕು ವಕಾರ್ಯಾಚರಣೆಗಳಲ್ಲಿ ಸುಮಾರು 1300 ಕೆಜಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧೋಲೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಎರಡು ಟ್ರಕ್‌ಗಳು ಮತ್ತು ಕಾರುಗಳನ್ನು ತಡೆಹಿಡಿಯಲಾಗಿದ್ದು, ನಾಲ್ಕು ವಾಹನಗಳಿಂದ ಸುಮಾರು 1300 ಕೆಜಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಈ ಸಂಬಂಧ ಜಯಂತ್ ಸಾಹು (19), ಫಾರೂಕ್ ಅಹ್ಮದ್ ಬರ್ಭುಯಾ (19), ಆಜಾದ್ ಹುಸೇನ್ ಲಸ್ಕರ್ (24), ನಾಸಿರ್ ಉದ್ದೀನ್ ಲಸ್ಕರ್ (22), ಸರೀಮ್ ಉದ್ದೀನ್ ತಾಲೂಕ್ಡರ್ (21) ಮತ್ತು ಸುಬ್ರತಾ ದಾಸ್ ಎಂಬ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬರ್ಮಾ ಅಡಿಕೆಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ  ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಹೈಲಕಂಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೂ ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಇಲ್ಲಿ ಕೂಡಾ 5750 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆಯಲಾಗಿದೆ. ಇದೇ ಪೊಲೀಸ್‌ ಠಾಣಾ ವ್ಯಾಪ್ತಿಯ ಇನ್ನೊಂದು ಪ್ರದೇಶದಲ್ಲಿ 4000 ಕೆಜಿ ಅಡಿಕೆ ವಶಕ್ಕೆ ಪಡೆಯಲಾಗಿದೆ.

Advertisement

ಈಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಪ್ರಯತ್ನ ನಡೆಸಲಾಗುತ್ತಿದೆ. ಹೀಗಾಗಿ ಬರ್ಮಾ ಅಡಿಕೆ ಆಮದು ತಡೆಗೆ ಇನ್ನಿಲ್ಲದ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ. ಹಾಗಿದ್ದರೂ ಇಲಾಖೆಗಳ ಕಣ್ಣುತಪ್ಪಿಸಿ ಅಡಿಕೆ ಆಮದಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

59 mins ago

ರಬ್ಬರ್‌ ಕೃಷಿಯಲ್ಲಿ ಇಳುವರಿ

https://youtu.be/9_lVHANbkbw?si=gs51b1nRlhqHImMM

5 hours ago

ಅಡಿಕೆ ಸಿಪ್ಪೆಯ ರಸದಿಂದ ಸೋಪು |

https://youtu.be/NM1Mfpu5cnY?si=-xAjUYPzEeRWDTx8

5 hours ago

ರಬ್ಬರ್‌ ಕೃಷಿ | ಕೃಷಿಯಲ್ಲಿ ಮಾರ್ಪಾಡು – ಹೆಚ್ಚು ಇಳುವರಿ ಪಡೆಯುತ್ತಿರುವ ಕೃಷಿಕ |

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್‌ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ.…

17 hours ago

ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ಅಗತ್ಯ | ಬಸವರಾಜ ಬೊಮ್ಮಾಯಿ

ಭಾರತೀಯ ಸಂಶೋಧನಾ ಕೇಂದ್ರಗಳು ಕ್ಯಾನ್ಸರ್ ನಿಯಂತ್ರಿಸುವಲ್ಲಿ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಮಾಜಿ…

19 hours ago

ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಬೇರು ಸಮೇತ ಕೀಳಬೇಕು | ಶ್ಯಾಂ ಭಟ್

ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ  ಬುಡ ಸಮೇತ ತೆಗೆದು…

19 hours ago