ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್‌ಕೌಂಟರ್‌ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel