ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

April 6, 2025
10:00 AM

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ ವಿಭಾಗದ ಆಸ್ಪತ್ರೆಯು ಐದು ದಿನಗಳಲ್ಲಿ 700 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಿದೆ, ಹಲವಾರು ಶಸ್ತ್ರಚಿಕಿತ್ಸೆಗಳು ಮತ್ತುಆರೋಗ್ಯ ಪರೀಕ್ಷೆಗಳನ್ನು ನಡೆಸಿದೆ. ಶನಿವಾರದವರೆಗೆ ಆಸ್ಪತ್ರೆಯು  716 ರೋಗಿಗಳಿಗೆ ಚಿಕಿತ್ಸೆ ನೀಡಿದೆ.……..ಮುಂದೆ ಓದಿ…..

Advertisement

ಸವಾಲಿನ ಪರಿಸ್ಥಿತಿಗಳ ನಡುವೆಯೂ, ಸೇನಾ ಆಸ್ಪತ್ರೆಯು 51 ಹೊಸ ರೋಗಿಗಳನ್ನು ದಾಖಲಿಸಿಕೊಂಡಿತು, 14 ಮಂದಿ ಚಿಕಿತ್ಸೆಯ ನಂತರ ಬಿಡುಗಡೆಯಾದರು. ವೈದ್ಯಕೀಯ ತಂಡವು ಇಂದು 38 ಸಣ್ಣ ಶಸ್ತ್ರಚಿಕಿತ್ಸೆಗಳು ಮತ್ತು 5 ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಿತು. ಶಸ್ತ್ರಚಿಕಿತ್ಸಾ ವಿಧಾನಗಳ ಜೊತೆಗೆ, ಆಸ್ಪತ್ರೆಯು 715 ಪ್ರಯೋಗಾಲಯದ ಪರೀಕ್ಷೆಗಳು ಮತ್ತು 65 ಎಕ್ಸ್-ರೇ ಗಳನ್ನು ನಡೆಸಿತು. ಹೀಗೆ ಎಲ್ಲಾ ವಿಧದಲ್ಲೂ ಸೇನೆಯು ಸೇವಾ ಕೆಲಸವನ್ನು ನಡೆಸಿದೆ. ಹೀಗಾಗಿ ಭಾರತೀಯ ಸೇನೆಯ ವೈದ್ಯಕೀಯ ತಂಡವು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ.

ಈ ನಡುವೆ  ಭಾರತದಿಂದ  ಶನಿವಾರ ಮ್ಯಾನ್ಮಾರ್‌ನ ತಿಲಾವಾ ಬಂದರಿಗೆ  ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಮತ್ತು ಬಿಸ್ಕೆಟ್ ಸೇರಿದಂತೆ 442 ಟನ್ ತೂಕದ ಆಹಾರ ವಸ್ತುವನ್ನು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿ ಅಭಯ್ ಠಾಕೂರ್ ಹಸ್ತಾಂತರಿಸಿದರು.

The Indian Army Field Hospital has set new standards in medical relief operations, treating over 700 victims in just five days. As of April 5, the hospital has attended to 716 patients, including 173 in the last 24 hours.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ
April 13, 2025
7:42 AM
by: The Rural Mirror ಸುದ್ದಿಜಾಲ
ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!
April 13, 2025
7:03 AM
by: ನಾ.ಕಾರಂತ ಪೆರಾಜೆ
2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ
April 13, 2025
6:38 AM
by: ದ ರೂರಲ್ ಮಿರರ್.ಕಾಂ
ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |
April 12, 2025
9:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group