Advertisement
ಕೃಷಿ

ಕೊರೋನಾ ಹೆಚ್ಚಳ | ಮೇ.15 ವರೆಗೆ ಕ್ಯಾಂಪ್ಕೋದಿಂದ ಅಡಿಕೆ ಖರೀದಿ ಇಲ್ಲ | ಅಡಿಕೆ ಮಾರುಕಟ್ಟೆ ಬಗ್ಗೆ ಆತಂಕ ಬೇಕಾಗಿಲ್ಲ – ಬೆಳೆಗಾರರಿಗೆ ಕ್ಯಾಂಪ್ಕೋ ಭರವಸೆ|

Share

ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ಕ್ಯಾಂಪ್ಕೋ ವತಿಯಿಂದ ಮೇ.11  ರಿಂದ ಮೇ.15  ರವರೆಗೆ ತಾತ್ಕಾಲಿಕವಾಗಿ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಡ್ಗಿ ತಿಳಿಸಿದ್ದಾರೆ. ಆದರೆ ಅಡಿಕೆ ಮಾರುಕಟ್ಟೆ ಯಾವುದೇ ಬೆಳೆಗಾರರು ಆತಂಕ ಪಡಬೇಕಾಗಿಲ್ಲ ಎಂದು ಭರವಸೆ ನೀಡಿದ್ದಾರೆ.

ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿದ್ದು ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರಗಳ ಕಠಿಣ ನಿಯಮ ಪಾಲನೆ ಹಾಗೂ ಪ್ರಸ್ತುತ ಪರಿಸ್ಥಿತಿಯಲ್ಲಿ ಸದಸ್ಯರ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ರೋಗ ಹರಡುವಿಕೆಯ ನಿಯಂತ್ರಣಕ್ಕಾಗಿ ಸರಕಾರಗಳ ಪ್ರಯತ್ನವನ್ನು ಬೆಂಬಲಿಸಿ ಮೇ.11 ರಿಂದ 15 ರ ವರೆಗೆ ಕೇರಳ ಹಾಗೂ ಕರ್ನಾಟಕದಲ್ಲಿ  ಸಂಸ್ಥೆಯ ಯಾವುದೇ ಶಾಖೆಗಳಲ್ಲಿ ಸರಕು ಖರೀದಿ ಸಹಿತ ಯಾವುದೇ ವಹಿವಾಟುಗಳು ನಡೆಯುವುದಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಈ ಹಿಂದೆ ಕೆಲವು ನಿಯಮಗಳೊಂದಿಗೆ ಖರೀದಿ ನಡೆಸುತ್ತಿತ್ತು. ಈಗಿನ ಅನಿವಾರ್ಯ ಪರಿಸ್ಥಿತಿಯಲ್ಲಿ ಖರೀದಿ ಸಾಧ್ಯವಾಗುತ್ತಿಲ್ಲ. ಆದರೆ ಇದುವರೆಗಿನ ಅಧ್ಯಯನದ ಪ್ರಕಾರ ಅಡಿಕೆಗೆ ಬೇಡಿಕೆ ಹೆಚ್ಚುತ್ತಿದೆ. ಅಡಿಕೆ ಮಾರುಕಟ್ಟೆ ಯಾವುದೇ ಕಾರಣಕ್ಕೂ ಅಸ್ಥಿರವಾಗುವುದಿಲ್ಲ, ಅಸ್ಥಿರಗೊಳಿಸಲೂ ಬಿಡುವುದಿಲ್ಲ. ಬೆಳೆಗಾರರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ಸರಕಾರದ ನಡೆಗಳ ಅನುಸಾರ ಖರೀದಿ ಪ್ರಕ್ರಿಯೆಯನ್ನು ಪುನರಾರಂಭಿಸುವ ಎಲ್ಲ ಪ್ರಯತ್ನಗಳನ್ನು ಸಂಸ್ಥೆಯು ಮಾಡಲಿದೆ ಮತ್ತು ಮುಂದಿನ ದಿನಗಳಲ್ಲಿ  ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡುವ ಬಗ್ಗೆ ಸಂಸ್ಥೆಯ ಆಡಳಿತಮಂಡಳಿ ತೀರ್ಮಾನಗಳನ್ನು ತೆಗೆದುಕೊಳ್ಳಲಿದೆ ಎಂದು ಕಿಶೋರ್‌ ಕುಮಾರ್‌ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್‌  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

17 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

17 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

17 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

21 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago