ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370 ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.
ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…