ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ.
ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ ಸಭೆ ಆಯೋಜನೆಯಾಗಿತ್ತು. ಸಭಾಂಗಣವು ಕಿಕ್ಕಿರಿದು ತುಂಬಿತ್ತು. ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷೇತರವಾದರೂ ಸ್ಫರ್ಧೆ ಮಾಡಲೇಬೇಕು, ಹಿಂದುತ್ವಕ್ಕೆ ನಿಜವಾದ ಬೆಲೆ ಸಿಗಬೇಕು ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಕಳೆದ ಬಾರಿ ಕೂಡಾ ಇದೇ ರೀತಿ ಮಾಡಲಾಗಿತ್ತು. ಕೊನೆಯ ಕ್ಷಣದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪ್ರಮುಖರು ನೀಡಿದ್ದರು. ಆದರೆ ಇಂದಿನವರೆಗೂ ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿ ಈ ಬಾರಿ ಸ್ಫರ್ಧೆ ಮಾಡಲೇಬೇಕು ಎಂದು ಅರುಣ್ ಕುಮಾರ್ ಬೆಂಬಲಿಗರು ಪ್ರತಿಪಾದನೆ ಮಾಡುತ್ತಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel