ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು.
ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.
ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡು ವಾದ್ಯದ ಮೂಲಕ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆಯ ಮೂಲಕ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…
ದಕ್ಷಿಣಕನ್ನಡದಲ್ಲಿ ನಡೆದ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ಮುಂದೆ…
ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ…
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಎರಡನೇ ದಿನದ ಕಾಡಾನೆ ಸೆರೆ…
ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು,…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…