ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.
ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.
ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …
ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್…
ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …