ಗಣೇಶ ಉತ್ಸವ ಸಂಭ್ರಮಗಳಲ್ಲಿ ಭಾಗಿಯಾದ ಅರುಣ್‌ ಪುತ್ತಿಲ | 40 ಕ್ಕೂ ಅಧಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವಕರ ನೆಚ್ಚಿನ “ಅರುಣಣ್ಣ” |

September 24, 2023
6:16 PM
ಹಿಂದೂ ನಾಯಕ ಅರುಣ್‌ ಕುಮಾರ್‌ ಪುತ್ತಿಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ನಡೆಯಿತು. ಊರಿನ ಜನರೆಲ್ಲಾ ಸಂಭ್ರಮದಿಂದ ಈ ಉತ್ಸವಗಳಲ್ಲಿ ಭಾಗವಹಿಸುತ್ತಾರೆ.ಈ ಬಾರಿ ಬಹುತೇಕ ಕಡೆಗಳಲ್ಲಿ ಯುವಕರು ವಿಶೇಷವಾಗಿ ಆಹ್ವಾನಿಸಿದ್ದು, ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು. ಕಳೆದ ಒಂದು ವಾರಗಳಿಂದ 42 ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. 

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಸಂಘಟನೆಯ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ಬಾಲಗಂಗಾಧರ ತಿಲಕರು ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಆರಾಧನೆಯನ್ನು ಆರಂಭಿಸಿದ್ದರು. ಇಂದು ದೇಶದಾದ್ಯಂತ ಸಂಘಟನೆಯ ಉದ್ದೇಶದಿಂದಲೂ, ಸಾಮರಸ್ಯದ ಉದ್ದೇಶದಿಂದಲೂ ಗಣೇಶೋತ್ಸವ ಸೇರಿದಂತೆ ಹಲವು ಸಾರ್ವಜನಿಕ ಆಚರಣೆಗಳು ನಡೆಯುತ್ತದೆ. ಇಂತಹ ಆಚರಣೆಗಳಲ್ಲಿ ಯುವಕರು ಹೆಚ್ಚಾಗಿ ತಮ್ಮ ನೆಚ್ಚಿನ ನಾಯಕರನ್ನು ಇಂತಹ ಕಾರ್ಯಕ್ರಮದಲ್ಲಿ  ಅಪೇಕ್ಷೆ ಪಡುತ್ತಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ನೆನಪಾದ್ದು ಅರುಣ್‌ ಕುಮಾರ್‌ ಪುತ್ತಿಲ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಭಾಗವಹಿಸಿದ್ದರು. ಎಲ್ಲೆಡೆಯೂ ಕಾರ್ಯಕ್ರಮ ಆಯೋಜನೆ ಹಾಗೂ ಆ ಬಳಿಕ ಪುತ್ತಿಲ ಅವರಿಗೆ ಕರೆ ಮಾಡಿ, “ಅರುಣಣ್ಣ ಬರಲೇಬೇಕು” ಎಂದು ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಹೀಗಾಗಿ ಈ ಪ್ರೀತಿಗೆ ಗೌರವ ನೀಡಿ ಬಹುತೇಕ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದುವರೆಗೆ 42 ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಕಡಬ ಹೀಗೇ  ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಳಿಂದ ಪ್ರವಾಸ ಮಾಡಿದರು. ಹಿಂದೂ ಮುಖಂಡನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಯುವಕರು ಮನ ಗೆದ್ದ ದ ಕ ಜಿಲ್ಲೆಯ ಒಬ್ಬ ನಾಯಕನಾಗಿ ಬೆಳೆದಿದ್ದಾರೆ.

Advertisement
ಕಳೆದ ತಿಂಗಳಿನಿಂದಲೇ ಯುವಕರು ಕರೆ ಮಾಡಿ ನಮ್ಮ ಊರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಒಂದು ಕ್ಷಣಕ್ಕಾದರೂ ಬರಲೇಬೇಕು ಎಂದು ಕರೆ ಮಾಡುತ್ತಿದ್ದರು. ಈ ಪ್ರೀತಿಗೆ ಬೆಲೆ ನೀಡಬೇಕಾದ್ದು ನನ್ನ ಕರ್ತವ್ಯ ಎಂದು ಭಾವಿಸಿ ಗಣೇಶೋತ್ಸವಗಳಲ್ಲಿ ಭಾಗವಹಿಸಿದ್ದೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ಆದರೆ ನಮಗೆ ಹಿಂದೂ ನಾಯಕನಾಗಿ, ಯುವಕರಿಗೆ ತಕ್ಷಣ ಸ್ಪಂದಿಸುವ ನಾಯಕನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಮಾತ್ರವೇ  ಎನ್ನುತ್ತಾರೆ ಯುವಕ ಹರೀಶ್‌ ನಾಯ್ಕ್.

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror