ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ನಡೆಯಿತು. ಊರಿನ ಜನರೆಲ್ಲಾ ಸಂಭ್ರಮದಿಂದ ಈ ಉತ್ಸವಗಳಲ್ಲಿ ಭಾಗವಹಿಸುತ್ತಾರೆ.ಈ ಬಾರಿ ಬಹುತೇಕ ಕಡೆಗಳಲ್ಲಿ ಯುವಕರು ವಿಶೇಷವಾಗಿ ಆಹ್ವಾನಿಸಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರನ್ನು. ಕಳೆದ ಒಂದು ವಾರಗಳಿಂದ 42 ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಸಂಘಟನೆಯ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ಬಾಲಗಂಗಾಧರ ತಿಲಕರು ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಆರಾಧನೆಯನ್ನು ಆರಂಭಿಸಿದ್ದರು. ಇಂದು ದೇಶದಾದ್ಯಂತ ಸಂಘಟನೆಯ ಉದ್ದೇಶದಿಂದಲೂ, ಸಾಮರಸ್ಯದ ಉದ್ದೇಶದಿಂದಲೂ ಗಣೇಶೋತ್ಸವ ಸೇರಿದಂತೆ ಹಲವು ಸಾರ್ವಜನಿಕ ಆಚರಣೆಗಳು ನಡೆಯುತ್ತದೆ. ಇಂತಹ ಆಚರಣೆಗಳಲ್ಲಿ ಯುವಕರು ಹೆಚ್ಚಾಗಿ ತಮ್ಮ ನೆಚ್ಚಿನ ನಾಯಕರನ್ನು ಇಂತಹ ಕಾರ್ಯಕ್ರಮದಲ್ಲಿ ಅಪೇಕ್ಷೆ ಪಡುತ್ತಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ನೆನಪಾದ್ದು ಅರುಣ್ ಕುಮಾರ್ ಪುತ್ತಿಲ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಭಾಗವಹಿಸಿದ್ದರು. ಎಲ್ಲೆಡೆಯೂ ಕಾರ್ಯಕ್ರಮ ಆಯೋಜನೆ ಹಾಗೂ ಆ ಬಳಿಕ ಪುತ್ತಿಲ ಅವರಿಗೆ ಕರೆ ಮಾಡಿ, “ಅರುಣಣ್ಣ ಬರಲೇಬೇಕು” ಎಂದು ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಹೀಗಾಗಿ ಈ ಪ್ರೀತಿಗೆ ಗೌರವ ನೀಡಿ ಬಹುತೇಕ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದುವರೆಗೆ 42 ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಕಡಬ ಹೀಗೇ ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಳಿಂದ ಪ್ರವಾಸ ಮಾಡಿದರು. ಹಿಂದೂ ಮುಖಂಡನಾಗಿ ಅರುಣ್ ಕುಮಾರ್ ಪುತ್ತಿಲ ಅವರು ಯುವಕರು ಮನ ಗೆದ್ದ ದ ಕ ಜಿಲ್ಲೆಯ ಒಬ್ಬ ನಾಯಕನಾಗಿ ಬೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ಆದರೆ ನಮಗೆ ಹಿಂದೂ ನಾಯಕನಾಗಿ, ಯುವಕರಿಗೆ ತಕ್ಷಣ ಸ್ಪಂದಿಸುವ ನಾಯಕನಾಗಿ ಅರುಣ್ ಕುಮಾರ್ ಪುತ್ತಿಲ ಅವರು ಮಾತ್ರವೇ ಎನ್ನುತ್ತಾರೆ ಯುವಕ ಹರೀಶ್ ನಾಯ್ಕ್.
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…