ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.
ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.
ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…