ಚುನಾವಣಾ ಕಣ | ಪುತ್ತೂರಿನಲ್ಲಿ ಆರಂಭವಾಗಿದೆ #PuttilaForPuttur ಟ್ವೀಟ್ ಅಭಿಯಾನ | ಭಾನುವಾರ ನಡೆಯಲಿದೆ ಟ್ವೀಟರ್ ಅಭಿಯಾನ |

January 28, 2023
10:25 PM

ರಾಜ್ಯದಲ್ಲಿ ಚುನಾವಣಾ  ದಿನಗಳು ಹತ್ತಿರ ಬರುತ್ತಿವೆ. ಈಗ ಅಭಿವೃದ್ಧಿ, ಓಲೈಕೆ ಸೇರಿದಂತೆ ವಿವಿಧ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗುತ್ತಿದೆ. ಕೆಲವು ಕಡೆ ಅಭ್ಯರ್ಥು ಬದಲಾವಣೆ, ಇನ್ನೂ ಕೆಲವು ಕಡೆ ಮುಂದುವರಿಕೆ ಇತ್ಯಾದಿಗಳ ಬಗ್ಗೆ ಚರ್ಚೆಯಾಗುತ್ತಿದ್ದಂತೆಯೇ ಇದೀಗ ಟ್ವೀಟ್‌ ಅಭಿಯಾನಗಳೂ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರಿಂದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಪರವಾದ ಒತ್ತಾಯ ಹೆಚ್ಚಾಗಿದ್ದು ಭಾನುವಾರ #PuttilaForPuttur ಟ್ವೀಟ್ ಅಭಿಯಾನ ನಡೆಯಲಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅರುಣ್‌ ಕುಮಾರ್‌ ಪುತ್ತಿಲ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು ಹಿಂದೂ ಕಾರ್ಯಕರ್ತರು ಾರುಣ್ ಕುಮಾರ್‌ ಪುತ್ತಿಲ ಅವರ ಹೆಸರನ್ನು ಹೇಳುತ್ತಿದ್ದಾರೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅರುಣ್‌ ಕುಮಾರ್‌ ಅಭಿಮಾನಿಗಳು ಟ್ವೀಟ್‌ ಅಭಿಯಾನ ಆರಂಭಿಸಿದ್ದು, ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅರುಣ್‌ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಹೆಚ್ಚಿದೆ. ಇದಕ್ಕಾಗಿ ಬಿ ಎಲ್‌ ಸಂತೋಷ್‌, ಬಿ ಎಸ್‌ ಯಡಿಯೂರಪ್ಪ , ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ವಿವಿಧ ಮಂದಿಯನ್ನು ಟ್ಯಾಗ್‌ ಮಾಡಿ ಪ್ರತಿಕ್ರಿಯೆ ನೀಡಲು ಸಿದ್ಧತೆ ನಡೆದಿದೆ. ಕಳೆದ ಬಾರಿ ಕೂಡಾ ಅರುಣದ್‌ ಕುಮಾರ್‌ ಪುತ್ತಿಲ ಅವರು ಪುತ್ತೂರಿನಿಂದ ಸ್ಫರ್ಧಿಸಲು ಆಕಾಂಕ್ಷಿಯಾಗಿದ್ದರು. ಆದರೆ ಸೀಟು ಸಿಕ್ಕಿರಲಿಲ್ಲ, ಬಳಿಕ ಬಿಜೆಪಿ ಹಾಗೂ ಸಂಘ ಪರಿವಾರದ ಪ್ರಮುಖರು ಅರುಣ್‌ ಕುಮಾರ್‌ ಪುತ್ತಿಲ ಜೊತೆ ಮಾತುಕತೆ ನಡೆಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror