ಅಗೆದಷ್ಟು ಮತ್ತೆ ಮತ್ತೆ ಸಿಗುತ್ತಲೇ ಇದೆ ಕಳ್ಳನಿಧಿ | ಐಟಿ ದಾಳಿಯಲ್ಲಿ 290 ಕೋಟಿ ರೂ. ಜಪ್ತಿ | ಇನ್ನಷ್ಟು ಸ್ಥಳಗಳಲ್ಲಿ ನಗದು ಬಚ್ಚಿಟ್ಟಿರುವ ಬಗ್ಗೆ ಗುಪ್ತಚರ ಮಾಹಿತಿ..! | ಯಾರು ಈ ಕೋಟಿಪತಿ..?

December 9, 2023
4:19 PM

ಜಾರ್ಖಂಡ್‌ನ ಕಾಂಗ್ರೆಸ್‌(Congress) ರಾಜ್ಯಸಭಾ ಸದಸ್ಯ ಧೀರಜ್ ಸಾಹು(Dheeraj sahu) ಅವರಿಗೆ ಸಂಬಂಧಿಸಿದ ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮದ್ಯ ತಯಾರಿಕಾ ಕಂಪನಿ ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್  ಮೇಲೆ ಆದಾಯ ತೆರಿಗೆ ಇಲಾಖೆ(Income Tax Department) ದಾಳಿ ನಡೆಸಿದೆ. ಈವರೆಗೆ ಬರೋಬ್ಬರಿ ಕನಿಷ್ಠ 290 ಕೋಟಿ ರೂ.ಗಳಷ್ಟು ನಗದು ಹಣವನ್ನು ಜಪ್ತಿಮಾಡಿದೆ.  ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ. ಅಧಿಕಾರಿಗಳ ಪ್ರಕಾರ, ಕಳೆದ ಎರಡು ದಿನಗಳಿಂದ ಒಡಿಶಾದ ಬೋಲಂಗಿರ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ನ ರಾಂಚಿ ಮತ್ತು ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ. ಇದು ದೇಶದ ಅತಿದೊಡ್ಡ ಐಟಿ ದಾಳಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಇಲಾಖೆಯು ಕಳೆದ ಎರಡು ದಿನಗಳಿಂದ 3 ರಾಜ್ಯಗಳಲ್ಲಿ ನಡೆಸಿದ ದಾಳಿಯಲ್ಲಿ  ಐಟಿ ಅಧಿಕಾರಿಗಳಿಗೆ ಇನ್ನೂ ಹೆಚ್ಚಿನ ಸ್ಥಳಗಳಲ್ಲಿ ನಗದು ಬಚ್ಚಿಟ್ಟಿರುವ ಬಗ್ಗೆ ಗುಪ್ತಚರ ಮಾಹಿತಿ ದೊರೆತಿದ್ದು, ನಗದಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಒಡಿಶಾ, ಜಾರ್ಖಂಡ್‌, ಪಶ್ಚಿಮ ಬಂಗಾಳ ಮೂಲದ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (BDPL) ಕಚೇರಿಗಳ ಮೇಲೆ ತೆರಿಗೆ ಇಲಾಖೆ ದಾಳಿ ನಡೆಸಿದೆ. ಈಗಾಗಲೇ ಮೂರು ರಾಜ್ಯಗಳ ಅನೇಕ ಕಡೆ ದಾಳಿ ನಡೆಸಿದ್ದು, ಜಪ್ತಿ ಮಾಡಲಾದ ಹಣದ ಪ್ರಮಾಣ 290 ಕೋಟಿ ರೂ.ಗೆ ಏರಿಕೆಯಾಗಿದೆ. ಇನ್ನೂ ಮೂರು ಸ್ಥಳಗಳಲ್ಲಿ 7 ಕೊಠಡಿಗಳಲ್ಲಿರುವ 9 ಲಾಕರ್‌ಗಳನ್ನು ಪರಿಶೀಲಿಸಬೇಕಾಗಿದೆ. ನಗದು ಹಣವನ್ನು ಬೀರು ಸೇರಿದಂತೆ ಇನ್ನಿತರ ಪೀಠೋಪಕರಣಗಳ ಒಳಗೆ ತುಂಬಿರುವುದು ಗುಪ್ತಚರ ಮಾಹಿತಿಗಳಿಂದ ಪತ್ತೆಯಾಗಿದೆ. ಹಾಗಾಗಿ ಇನ್ನೂ ನೋಟು ಎಣಿಕೆ ಕಾರ್ಯ ನಡೆಯುತ್ತಿದ್ದು, ಚಿನ್ನಾಭರಣಗಳೂ ಸಿಗುವ ಸಾಧ್ಯತೆಗಳಿವೆ. ಜೊತೆಗೆ ದಾಳಿ ನಡೆಸಬೇಕಾದ ಇನ್ನಷ್ಟು ಸ್ಥಳಗಳ ಬಗ್ಗೆಯೂ ಮಾಹಿತಿ ಪಡೆದಿದ್ದೇವೆ ಎಂದು ಐಟಿ ಅಧಿಕಾರಿ ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಇಲಾಖೆಯು ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ ಕಚೇರಿ ಮತ್ತು ಕಂಪನಿಗೆ ಸಂಪರ್ಕ ಹೊಂದಿದ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿ 200 ಕೋಟಿ ರೂ.ಗಳಷ್ಟು ಹಣವನ್ನು ಜಪ್ತಿ ಮಾಡಲಾಗಿತ್ತು. ಭಾರೀ ಪ್ರಮಾಣದಲ್ಲಿ ನೋಟುಗಳ ಸಂಖ್ಯೆ ಇದ್ದ ಕಾರಣ ನೋಟು ಎಣಿಸುವ ಯಂತ್ರಗಳು ಕೆಲಸ ಮಾಡುವುದನ್ನೇ ನಿಲ್ಲಿಸಿದ್ದವು. 2019 ರಿಂದ 2021ರ ಹಣಕಾಸು ವರ್ಷದಲ್ಲಿ ಕಂಪನಿ ಕಡಿಮೆ ಆದಾಯ ತೋರಿಸಿತ್ತು. ಲೆಕ್ಕ ಪತ್ರದಲ್ಲಿ ತೋರಿಸಲಾದ ಅನುಮಾನಾಸ್ಪದ ಇತರ ಪಾವತಿಗಳ ಬಗ್ಗೆ ಈಗ ಐಟಿ ತನಿಖೆ ನಡೆಸುತ್ತಿದೆ.

– ಅಂತರ್ಜಾಲ ಮಾಹಿತಿ

The Income Tax Department has raided liquor manufacturing company Baud Distillery Private Limited in Jharkhand and Odisha, which is linked to Congress Rajya Sabha member Dheeraj Sahu from Jharkhand. So far Barobbari has seized at least Rs 290 crore in cash. A huge amount of currency notes were seized. According to officials, this is likely to be the biggest IT attack in the country, sources said.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror